

ದಾವಣಗೆರೆ : ಸದ್ಯಕ್ಕೆ ಸಿಎಂ ಆಗಲು ಕಾಂಗ್ರೆಸ್‌ನಲ್ಲಿ ಪೈಪೋಟಿ ಇಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಸಂದರ್ಭ ಬಂದಾಗ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇದೇ ಅವಧಿಯಲ್ಲಿ ಡಿಕೆಶಿ ಸಿಎಂ ಆಗುವ ಅವಕಾಶವಿದೆ. ಆದರೆ ಈಗ ಆ ಸಂದರ್ಭ ಬಂದಿಲ್ಲ ಎಂದು ತಿಳಿಸಿದರು. ರಾಜ್ಯಪಾಲರ ಮೂಲಕ ಬಿಜೆಪಿ ಕುತಂತ್ರ ಮಾಡುತ್ತಿದೆ. ಹಿಂಬಾಗಿಲಿನಿಂದ ಸರ್ಕಾರ ಕೆಡವಲು ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತಾಗಿದ್ದಾರೆ ಎಂದು ಆರೋಪಿಸಿದರು.