ಇಂದಿನಿಂದ ನಾಮಪತ್ರ ಸಲ್ಲಿಕೆ

Dc-office_20240412003618337.jpg
Published on

ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಶುಕ್ರವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು ಮೊದಲ ದಿನವೇ ಕೆಲವು ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಲಿದ್ದಾರೆ.
 ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಉಮೇದುವಾರಿಕೆ ಸಲ್ಲಿಕೆಗೆ ಏ. 19 ಕೊನೆಯ ದಿನವಾಗಿದೆ.
 ಸಾಮಾನ್ಯವಾಗಿ ಮೊದಲ ನಾಮಪತ್ರವನ್ನು ಸದ್ದುಗದ್ದಲವಿಲ್ಲದೆ ಸಲ್ಲಿಸಲಾಗುತ್ತದೆ. ಮತ್ತೊಂದು ದಿನ ಕಾರ್ಯಕರ್ತರು, ಅಭಿಮಾನಿಗಳ ಜತೆಗೆ ಅದ್ದೂರಿಯಾಗಿ ಮೆರವಣಿಗೆಯಲ್ಲಿ ಬಂದು ಶಕ್ತಿ ಪ್ರದರ್ಶನ ಮಾಡಲಾಗುತ್ತದೆ. ವಾದ್ಯಗಳ ಸದ್ದು, ಬೆಂಬಲಿಗರ ಜಯ ಘೋಷವಿರುತ್ತದೆ. ಯಾವ ಅಭ್ಯರ್ಥಿಯ ಮೆರವಣಿಗೆ ಜೋರಾಗಿತ್ತು ಎನ್ನುವ ಚರ್ಚೆಗಳು ನಡೆಯುತ್ತವೆ.
 ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಗಳು ಬಹಳಷ್ಟು ಸಿದ್ಧತೆ ಮಾಡಿಕೊಂಡಿರುತ್ತಾರೆ. ಯಾವುದೇ ತಪ್ಪುಗಳು ಆಗಬಾರದು. ಯಾವುದೆ ಕಾರಣಕ್ಕೂ ತಿರಸ್ಕೃತವಾಗಬಾರದು ಎನ್ನುವ ಎಚ್ಚರಿಕೆ ವಹಿಸಲಾಗುತ್ತದೆ. ಇದಕ್ಕಾಗಿ ಕಾನೂನು ಪಂಡಿತರ ಸಲಹೆಯನ್ನೂ ಪಡೆಯಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net