ಅಮಾನತು ಆದೇಶ ವಾಪಸ್ ಪಡೆಯಲು ಆಗ್ರಹ

dvg-Aluru-ningaraj.jpg
Published on

ದಾವಣಗೆರೆ: ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಜಿಲ್ಲಾ ಬಿಜೆಪಿ ಮುಖಂಡ ಆಲೂರು ನಿಂಗರಾಜ್ ಆಗ್ರಹಿಸಿದ್ದಾರೆ.
 ಈ ಕುರಿತು ಪ್ರಕಟಣೆ ನೀಡಿರುವ ಅವರು, 11 ಅಮಾಯಕ ಜೀವಗಳು ಬಲಿಯಾಗಿರುವುದರ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಹೇಳಿದ್ದಾರೆ.
 ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲು ಸಾಧ್ಯವಾಗದಿದ್ದರೆ ಇಂತಹ ಸರ್ಕಾರ ಏಕೆ ಬೇಕು. ಜನದಟ್ಟಣೆ ನಿಯಂತ್ರಣ ಕಷ್ಟ ಎಂದು ಪೊಲೀಸರ ಎಚ್ಚರಿಕೆಯ ಮಾತುಗಳನ್ನು ಪಕ್ಕಕ್ಕಿಟ್ಟು, ಹಠಕ್ಕೆ ಬಿದ್ದು ಸಮಾರಂಭ ನಡೆಸಿದ್ದೇ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.
 ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net