ಕನ್ನಡದಲ್ಲಿ ಪ್ರಭಾ ಮಲ್ಲಿಕಾರ್ಜುನ್ ಪ್ರಮಾಣವಚನ

mp.jpg
Published on

ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ್ ಸೋಮವಾರ ಸಂಸದರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಂಸತ್ ಭವನದ ಮೆಟ್ಟಿಲುಗಳಿಗೆ ನಮಸ್ಕರಿಸಿ ಒಳಗೆ ಪ್ರವೇಶಿಸಿದ ಪ್ರಭಾ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪತಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಪುತ್ರರಾದ ಸಮರ್ಥ್, ಶಿವಾ, ಪುತ್ರಿ ಶ್ರೇಷ್ಠಾ ಈ ಸಂದರ್ಭಕ್ಕೆ ಸಾಕ್ಷಿಯಾದರು.

ಸೊಸೆ ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸುವುದನ್ನು ಟಿವಿಯಲ್ಲಿ ವೀಕ್ಷಿಸಿದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದರು.

ಪ್ರಭಾ ಅವರು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.

...

* ಕಸಾಪ ಹರ್ಷ

ಪ್ರಭಾ ಮಲ್ಲಿಕಾರ್ಜುನ್ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಭಾಷೆಯ ಕಂಪನ್ನು ಪಸರಿಸುವಂತೆ ಮಾಡಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ವಾಮದೇವಪ್ಪ ಮತ್ತು ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಕಸಾಪದಿಂದ ಇತ್ತೀಚಿಗೆ ಪ್ರಭಾ ಅವರನ್ನು ಸನ್ಮಾನಿಸಲು ಅವರ ನಿವಾಸಕ್ಕೆ ಹೋದಾಗ, ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕೆಂದು ಕೇಳಿಕೊಂಡಾಗ ಅವರು ಸಮ್ಮತಿಸಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net