ಫೋಟೋ, ವಿಡಿಯೋಗ್ರಾಫರ್ಸ್ ಸಂಘದ ವಾರ್ಷಿಕೋತ್ಸವ

IMG-20240817-WA0075.jpg
Published on

ದಾವಣಗೆರೆ :  ದಾವಣಗೆರೆ ತಾಲೂಕು ಫೋಟೋ ಮತ್ತು ವಿಡಿಯೋಗ್ರಾಫರ್ಸ್ ಸಂಘದ 12ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಛಾಯಾಗ್ರಾಹಕರಿಗೆ ಹಾಗೂ ಸಾಧಕರಿಗೆ ಸನ್ಮಾನ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಗರದ ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಹಿರೇಮಠದಲ್ಲಿ ಸೋಮವಾರ ನಡೆಯಲಿದೆ.  ಅಂದು ಬೆಳಗ್ಗೆ 10 ಗಂಟೆಗೆ ನ್ಯೂ ಡೇಟಾ ರಿಕವರಿ ಬಗ್ಗೆ ಕಾರ್ಯಾಗಾರ ಹಾಗೂ 11 ಗಂಟೆಗೆ ಆಲ್ಬಮ್ ಡಿಸೈನಿಂಗ್ ತರಬೇತಿ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ. ಮನು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  ಸಂಜೆ 4.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ ಸಮಾರಂಭ, ಕ್ರೀಡೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಣ್ವಕುಪ್ಪೆ ಗವಿಮಠದ ನಾಲ್ಮಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.  ಕಾರ್ಯಕ್ರಮದ ಅಂಗವಾಗಿ ವಿನೋಬನಗರದ ಮುರುಘರಾಜೇಂದ್ರ ಪ್ರೌಢಶಾಲೆಯ ಮೈದಾನದಲ್ಲಿ ಭಾನುವಾರ ಬೆಳಗ್ಗೆ 9.30ರಿಂದ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ತಿಳಿಸಿದರು.  ಸಂಘದ ಗೌರವಾಧ್ಯಕ್ಷ ಬಿ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಖಜಾಂಚಿ ಡಿ.ರಂಗನಾಥ್, ಸಂಘಟನಾ ಕಾರ್ಯದರ್ಶಿ ವಿಜಯಕುಮಾರ್ ಮುಧೋಳೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net