ಕವಿ ಎಚ್‌ಎಸ್‌ವಿ ಮನೆ ಸ್ಮಾರಕವಾಗಲಿ

dvg-Nagaraj-sirigere.jpg
Published on

ದಾವಣಗೆರೆ :  ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ನಾಡಿನ ಹಿರಿಯ ಕವಿ ಡಾ. ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಜನಿಸಿದ ಮನೆಯನ್ನು ಸ್ಮಾರಕ ಮಾಡುವುದರ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಕನ್ನಡ ಅಧ್ಯಾಪಕ ನಾಗರಾಜ ಸಿರಿಗೆರೆ ಆಗ್ರಹಿಸಿದ್ದಾರೆ.  ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.  ಡಾ. ವೆಂಕಟೇಶ ಮೂರ್ತಿ ಅವರು ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದವರು. ಮಕ್ಕಳ ಸಾಹಿತ್ಯದಿಂದ ಮಹಾಕಾವ್ಯದ ವರೆಗೆ ಅವರ ಬರಹ ವಿಸ್ತಾರವಾದುದು. ಕಥೆ, ಕಾದಂಬರಿ, ನಾಟಕ, ಭಾವಗೀತೆ, ಮಹಾಕಾವ್ಯ, ವಿಮರ್ಶೆ, ಅನುವಾದ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದ್ದಾರೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಗೌರವ ಪಡೆದ ಜಿಲ್ಲೆಯ ಏಕೈಕ ಕವಿ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net