ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ

dvg-UMA-PRASHANT_SP.jpg
Published on

ದಾವಣಗೆರೆ  : ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಭೀತಿ ಸೃಷ್ಟಿಯಾಗಿದೆ. ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ, ಇತರೆ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಉಮಾ ಪ್ರಶಾಂತ್ ಹೇಳಿದ್ದಾರೆ.  ಗಡಿಯಲ್ಲಿ ಉದ್ವಿಗ್ನತೆ ಬಗ್ಗೆ ಎಲ್ಲ ಪೊಲೀಸರಿಗೂ ತಿಳಿದಿದೆ. ಅವರು ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಜನರು ಆತಂಕಕ್ಕೆ ಒಳಗಾಗದ ರೀತಿ ತಿಳಿವಳಿಕೆ ನೀಡಬೇಕು. ಸುಳ್ಳು ಸುದ್ದಿ ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಮಾಹಿತಿಯನ್ನು ಪೋಸ್ಟ್ ಅಥವಾ ಶೇರ್ ಮಾಡುವ ಮೊದಲು ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಜಿಲ್ಲೆಯಾದ್ಯಂತ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net