ಹಿಂದು ಮಹಾಗಣಪತಿ ಶೋಭಾಯಾತ್ರೆ ಇಂದು

dvg-pared.jpg
Published on

ದಾವಣಗೆರೆ : ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದು ಮಹಾಗಣಪತಿಯ ವಿಸರ್ಜನಾ ಮೆರವಣಿಗೆ ಶನಿವಾರ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.  ದಾವಣಗೆರೆ ಮತ್ತು ನೆರೆಯ ಜಿಲ್ಲೆಗಳಿಂದ 1500 ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಜತೆಗೆ ಕೆಎಸ್‌ಆರ್‌ಪಿ, ಡಿಎಆರ್, ಕ್ಷಿಪ್ರ ಕಾರ್ಯಾಚರಣೆ ಪಡೆಗಳನ್ನು ನಿಯೋಜಿಸಲಾಗಿದೆ. ಸಿಸಿ ಟಿವಿ ಕಣ್ಗಾವಲಿದೆ. ಹೆಚ್ಚುವರಿಯಾಗಿ 100 ಸಿಸಿ ಕ್ಯಾಮರಾ ಅಳವಡಿಸಲಾಗಿದೆ. 5 ಡ್ರೋನ್ ಕ್ಯಾಮರಾಗಳು ಹಾರಾಡಲಿದ್ದು ವಿಡಿಯೋಗ್ರಾಫರ್‌ಗಳನ್ನು ನಿಯೋಜಿಸಲಾಗಿದೆ.  ನಗರದಲ್ಲಿ ಚೆಕ್‌ಪೋಸ್ಟ್‌ಗಳನ್ನು ಹೆಚ್ಚಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗಿದೆ. ಸಂಘಟಕರು, ಮುಖಂಡರ ಜತೆಗೆ ಮಾತನಾಡಲಾಗಿದೆ. ಸೂಕ್ಷ್ಮ ಮತ್ತು ಆಯಕಟ್ಟಿನ ಜಾಗಗಳಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.  ಹಿಂದು ಮಹಾಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ಶುಕ್ರವಾರ ನಗರದಲ್ಲಿ ಪೊಲೀಸ್ ಪಥ ಸಂಚಲನ ನಡೆಯಿತು.    

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net