ವಿಜಯದಶಮಿ ಮೆರವಣಿಗೆಗೆ ಪೊಲೀಸ್ ಭದ್ರತೆ

dvg-UMA-PRASHANT_SP_20250930235036147.jpg
Published on

ದಾವಣಗೆರೆ : ವಿಶ್ವ ಹಿಂದು ಪರಿಷತ್ತು ಮತ್ತು ಸಾರ್ವಜನಿಕ ವಿಜಯದಶಮಿ ಮಹೋತ್ಸವ ಸಮಿತಿಯಿಂದ ಅ. 2 ರಂದು ನಗರದಲ್ಲಿ ಆಯೋಜಿಸಿರುವ ವಿಜಯದಶಮಿ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಕಾನೂನು, ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.  ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ, ಹಾಗೂ ಕೆ.ಎಸ್.ಆರ್.ಪಿ, ಡಿಎಆರ್ ತುಕಡಿಗಳು, ಕ್ಯೂ.ಆರ್.ಟಿ ತಂಡಗಳು, ದುರ್ಗಾ ಪಡೆ, ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.  ಮೆರವಣಿಗೆ ಉದ್ದಕ್ಕೂ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಸಲಾಗಿದೆ. ಮೆರವಣಿಗೆಯ ಸಂಪೂರ್ಣ ಚಿತ್ರೀಕರಣಕ್ಕೆ ಹೆಚ್ಚಿನ ವಿಡಿಯೋಗ್ರಾಫರ್‌ಗಳನ್ನು ನಿಯೋಜಿಸಲಾಗಿದೆ. ಮೆರವಣಿಗೆಯ ಉದ್ದಕ್ಕೂ ಡ್ರೋನ್ ಕಣ್ಗಾವಲು ಇರಲಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net