ರಾಷ್ಟ್ರೀಯ ಯುವ ಉತ್ಸವದಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳು

dvg-visual-arts-college.jpg
Published on

ದಾವಣಗೆರೆ : ನವದೆಹಲಿಯ ಅಮಿತಿ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಅಂತರ ವಿಶ್ವವಿದ್ಯಾಲಯ 38ನೇ ರಾಷ್ಟ್ರೀಯ ಯುವ ಉತ್ಸವದಲ್ಲಿ ದಾವಣಗೆರೆಯ ದೃಶ್ಯಕಲಾ ಮಹಾವಿದ್ಯಾಲಯದ ಅನ್ವಯಿಕ ಕಲಾ ವಿಭಾಗದ ವಿದ್ಯಾರ್ಥಿ ಸಿದ್ದಪ್ಪ ಕರಡಿ ಪೋಸ್ಟರ್ ರಚನಾ ಸ್ಪರ್ಧೆಯಲ್ಲಿ ಪ್ರಥಮ, ಶಿಲ್ಪಕಲಾ ವಿದ್ಯಾರ್ಥಿ ವಿನೋದ್  ಕ್ಲೇ ಮಾಡೆಲಿಂಗ್‌ನಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆ ಬಗ್ಗೆ ದಾವಣಗೆರೆ ವಿವಿ ಕುಲಪತಿ ಪ್ರೊ. ಬಿ.ಡಿ. ಕುಂಬಾರ, ಕುಲಸಚಿವ (ಆಡಳಿತ) ಪ್ರೊ. ಆರ್. ಶಶಿಧರ್, ಪ್ರಾಚಾರ್ಯ ಡಾ. ಜೈರಾಜ  ಎಂ. ಚಿಕ್ಕ ಪಾಟೀಲ್, ಸಹಾಯಕ ಪ್ರಾಧ್ಯಾಪಕ ಡಾ. ಸತೀಶ್ ಕುಮಾರ್ ಪಿ. ವಲ್ಲೇಪುರೆ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net