ಯತ್ನಾಳ್ ಉಚ್ಚಾಟನೆ ಖಂಡಿಸಿ ಪ್ರತಿಭಟನೆ

dvg-panchamasali-protest.jpg
Published on

ದಾವಣಗೆರೆ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಉಚ್ಚಾಟನೆ ಖಂಡಿಸಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.  ಜಯದೇವ ವೃತ್ತದಿಂದ ಮಹಾತ್ಮ ಗಾಂಧಿ ವೃತ್ತದ ಮಾರ್ಗವಾಗಿ ಅರುಣಾ ಚಿತ್ರಮಂದಿರದ ಬಳಿಯ ರಾಣಿ ಚನ್ನಮ್ಮ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಮುಖಂಡರು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದರು.  ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ವಿ. ಅಶೋಕ ಗೋಪನಾಳು ಇನ್ನಿತರ ಮುಖಂಡರು, ಸಮುದಾಯದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net