ಜೆಡಿಎಸ್​ ಮತ್ತೊಂದು ವಿಕೆಟ್​ ಪತನ: ಮಾಜಿ ಎಂಎಲ್​ಸಿ ರಮೇಶ ಬಾಬು ರಾಜೀನಾಮೆ

Ramesh Babu 7 amr 20
Published on

ದಾವಣಗೆರೆ: ಲೋಕಸಭಾ ಚುನಾವಣೆ ಹಾಗೂ ಕೆಲವು ತಿಂಗಳ ಹಿಂದೆ ಮುಗಿದ ಉಪಚುನಾವಣೆಯ ನಂತರವೂ ಜೆಡಿಎಸ್​ ಪಕ್ಷದಲ್ಲಿ ಅಸಮಾಧಾನದ ಹೊಗೆ ಸ್ಪೋಟಗೊಳ್ಳುತ್ತಲೇ ಇದೆ. ಎಲ್ಲವೂ ಸರಿಯಿದೆ ಎಂದು ಪಕ್ಷದ ಹಿರಿಯ ನಾಯಕರು ತೇಪೆ ಹಚ್ಚುತ್ತಿರುವ ನಡುವೆಯೇ ಮತ್ತೊಂದು ವಿಕೆಟ್​ ಪತನವಾಗಿದೆ.

ಜೆಡಿಎಸ್​ನ ಮಾಜಿ ಎಂಎಲ್​ಸಿ ರಮೇಶ ಬಾಬು ಇದೀಗ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ವಕ್ತಾರರಾಗಿದ್ದ ರಮೇಶ್​ ಬಾಬು ಕಳೆದ 40 ವರ್ಷಗಳಿಂದ ಜೆಡಿಎಸ್‌ನಲ್ಲಿ ಗುರುತಿಸಿಕೊಂಡಿದ್ದರು. ಇದೀಗ ರಾಜೀನಾಮೆ ನೀಡಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಆಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ತಮ್ಮ ನಿಲುವಿನ ಬಗ್ಗೆ ಮಾತನಾಡಿರುವ ರಮೇಶ್​ ಬಾಬು, ಪಕ್ಷದಲ್ಲಿ ಪ್ರಾಮಾಣಿಕರಿಗೆ ಅವಕಾಶವಿಲ್ಲ. ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ. ಪ್ರಾದೇಶಿಕ ಪಕ್ಷದ ಅಗತ್ಯವಿದೆ ಎಂಬ ಕಾರ್ಯಕರ್ತರ ನಂಬಿಕೆಗೆ ಅನ್ಯಾಯವಾಗಿದೆ. ಜೆಡಿಎಸ್ ಪಕ್ಷದ ನಿಷ್ಠರು ಪಕ್ಷ ಬಿಡುತ್ತಿದ್ದಾರೆ. ಜೆಡಿಎಸ್ ಪಕ್ಷ ಪ್ರಾದೇಶಿಕ ಪಕ್ಷದ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಬೇರೆ ಪಕ್ಷದಿಂದ ಆಫರ್ ಬಂದರೆ ಪರಿಗಣಿಸುತ್ತೇನೆ ಎಂದು ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net