

ದಾವಣಗೆರೆ : ನಗರದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಶುಕ್ರವಾರ ರಥಸಪ್ತಮಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳು ಶಿಕ್ಷಕ ರಮೇಶ್ ನೇತೃತ್ವದಲ್ಲಿ ಶಾಲಾ ಮೈದಾನದಲ್ಲಿ ಸೂರ್ಯ ನಮಸ್ಕಾರ ಮಾಡಿದರು. ನವೀನ್ ಸುಬ್ರಹ್ಮಣ್ಯ ರಥಸಪ್ತಮಿಯ ವಿಶೇಷತೆಯನ್ನು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ಜಯಣ್ಣ, ಆಡಳಿತ ಮಂಡಳಿಯ ಸದಸ್ಯೆ ಭಾರತಿ ಹೆಗಡೆ, ಶೈಕ್ಷಣಿಕ ಸಂಯೋಜಕ ಶಿವರಾಜ್, ಶಿಕ್ಷಕರು ಇದ್ದರು.
ವೀಣಾ ಪ್ರಸಾದ್ ಮತ್ತು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಪವಿತ್ರಾ ಸ್ವಾಗತಿಸಿದರು. ಕಾವೇರಿ ನಿರೂಪಿಸಿದರು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.