ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ

RENUKACHARYA_MLA_2_20250520000237913.jpg
Published on

ದಾವಣಗೆರೆ : ಕಾಂಗ್ರೆಸ್ ಸರ್ಕಾರ ಹೊಸಪೇಟೆಯಲ್ಲಿ ಮಂಗಳವಾರ ಆಯೋಜಿಸಿರುವ ಸಾಧನಾ ಸಮಾವೇಶದ ಬಗ್ಗೆ ‘ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ.  ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಬಡವರ ಸಮಾಧಿ ಮೇಲೆ ಸಮಾವೇಶ ಮಾಡುತ್ತಿದೆ. ಭರವಸೆ ನೆಪದಲ್ಲಿ ಆಡಳಿತ ನಡೆಸುವವರು ಲೂಟಿ ಮಾಡುತ್ತಿದ್ದಾರೆ. ಯಾವ ನೈತಿಕತೆ ಮೇಲೆ ಸಮಾವೇಶ ಆಯೋಜಿಸಿದ್ದಾರೆ ಎಂದು ಪ್ರಶ್ನಿಸಿದರು.  ಯಾವ ಇಲಾಖೆಗೆ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ ಎಂದು ಶ್ವೇತಪತ್ರ ಹೊರಡಿಸುವಂತೆ ಒತ್ತಾಯಿಸಿದರು. ಕಾಂಗ್ರೆಸ್ ನಾಯಕರ ಪ್ರತ್ಯೇಕ ವೇದಿಕೆ ಮಾಡಿದ್ದಾರೆ, ಇದು ಹೇಗೆ ಸರ್ಕಾರದ ಸಮಾವೇಶ ಆಗುತ್ತದೆ ಎಂದರು.    

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net