ಸರ್ವೀಸ್ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

dc-gangadharaswamy-gm-Copy_20240903232936922.jpg
Published on

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಷಟ್ಪಥ ರಸ್ತೆ ಮೇಲ್ದರ್ಜೆಗೇರಿಸುವ ಸರ್ವೀಸ್ ರಸ್ತೆ ಕೆಲಸ ನಗರದ ಕೆಲವು ಭಾಗದಲ್ಲಿ ಬಾಕಿಯಿದ್ದು, ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.  ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ನಗರಕ್ಕೆ ಹೊಂದಿಕೊಂಡಂತೆ ಹಾಗೂ ಕುಂದುವಾಡ ಬ್ರಿಡ್ಜ್, ಅಗಸನಕಟ್ಟೆ ಬಳಿ ಸರ್ವೀಸ್ ರಸ್ತೆ ಕಾಮಗಾರಿ ಬಾಕಿಯಿವೆ. ಇದರಿಂದ ಅಪಘಾತಗಳು ಸಂಭವಿಸಬಹುದಾಗಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.  ರಸ್ತೆ ಕಾಮಗಾರಿಗೆ ರೈತರು ಅಡ್ಡಿಪಡಿಸುತ್ತಿದ್ದಾರೆ ಎನ್ನಲಾಗಿದ್ದು, ಕಾನೂನು ಪ್ರಕಾರ ರೈತರಿಗೆ ಪರಿಹಾರದ ಮೊತ್ತ ಪಾವತಿಸಿ, ಇಲ್ಲವೇ ಠೇವಣಿ ಇಟ್ಟು ಕಾಮಗಾರಿ ಮುಂದುವರಿಸಬೇಕು. ಅಗತ್ಯವಿದ್ದಲ್ಲಿ ಪೊಲೀಸ್ ರಕ್ಷಣೆ ಒದಗಿಸಲಾಗುವುದು ಎಂದರು.  ಅಪರ ಜಿಲ್ಲಾಧಿಕಾರಿ ಪಿ.ಎನ್. ಲೊಕೇಶ್, ಎಸ್‌ಪಿ ಉಮಾ ಪ್ರಶಾಂತ್, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ತಹಸೀಲ್ದಾರ್ ಅಶ್ವಥ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net