ಹುಬ್ಬಳ್ಳಿಯಲ್ಲಿ ವೀರಶೈವ ಲಿಂಗಾಯತ ಏಕತಾ ಸಮಾವೇಶ

IMG-20250918-WA0017.jpg
Published on

ದಾವಣಗೆರೆ :  ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೇತೃತ್ವದಲ್ಲಿ ಸೆ. 19 ರಂದು ಹುಬ್ಬಳ್ಳಿಯಲ್ಲಿ ವೀರಶೈವ ಲಿಂಗಾಯತ ಏಕತಾ ಸಮಾವೇಶ ನಡೆಯಲಿದೆ ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಶಂಭು ಉರೇಕೊಂಡಿ ತಿಳಿಸಿದರು.  ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಂಚ ಪೀಠಾಧೀಶರು ಸೇರಿ ರಾಜ್ಯದ ವಿವಿಧ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಶದ ಉದ್ಘಾಟನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.  ವೀರಶೈವ ಲಿಂಗಾಯತ ಸಮುದಾಯವನ್ನು ಒಂದುಗೂಡಿಸುವುದೇ ಸಮಾವೇಶದ ಪ್ರಮುಖ ಉದ್ದೇಶವಾಗಿದೆ. ಭಾಗವಹಿಸುವ ಎಲ್ಲರಿಗೂ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ. ವೀರಶೈವ ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.  ಮಹಾಸಭಾದ ತಾಲೂಕು ಯುವ ಘಟಕದ ಅಧ್ಯಕ್ಷ ಅಜಿತ್ ಆಲೂರು, ಕಾರ್ತಿಕ್ ಹಿರೇಮಠ, ಸುನಿಲ್ ಬಾಗೇವಾಡಿ, ಮಲ್ಲಿಕಾರ್ಜುನ ಕಟ್ಟಿಮನಿ ಇದ್ದರು.    

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net