

ದಾವಣಗೆರೆ : ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ವರಮಹಾಲಕ್ಷ್ಮಿಹಬ್ಬ ಮತ್ತು ರಕ್ಷಾಬಂಧನದ ಪ್ರಯುಕ್ತ ಸಾಧಕರನ್ನು ಸನ್ಮಾನಿಸಲಾಯಿತು.
ಅಧ್ಯಕ್ಷೆ ಅನಿತಾಬಾಯಿ ಅವರ ನೇತೃತ್ವದಲ್ಲಿ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ಪಾಲಿಕೆ ಆಯುಕ್ತೆ ರೇಣುಕಾ ಅವರನ್ನು ಸನ್ಮಾನಿಸಲಾಯಿತು.
ಎಸ್.ಎಸ್. ಕೇರ್ ಟ್ರಸ್ಟ್‌ನ ಲೈಫ್ ಟ್ರಸ್ಟಿ ಪ್ರಭಾ ಮಲ್ಲಿಕಾರ್ಜುನ್ ಅವರು ಮಹಿಳಾ ಕಾಂಗ್ರೆಸ್‌ನ ಎಲ್ಲ ಪದಾಧಿಕಾರಿಗಳನ್ನು ಸತ್ಕರಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಇತರರು ಇದ್ದರು.