ಪಠ್ಯದ ಜತೆಗೆ ಕ್ರೀಡೆಗಳಲ್ಲೂ ಆಸಕ್ತಿ ಇರಲಿ

someshawr-1.jpg
Published on

ದಾವಣಗೆರೆ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡೆಗಳಲ್ಲೂ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಶ್ರೀ ಸೋಮೇಶ್ವರ ವಿದ್ಯಾಲಯದ ಪ್ರಾಚಾರ್ಯೆ ಪ್ರಭಾವತಿ ಸಲಹೆ ನೀಡಿದರು.
 ನಗರದ ನಿಟುವಳ್ಳಿ ರಸ್ತೆಯ ಶ್ರೀ ಸೋಮೇಶ್ವರ ವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
 ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ದೊರೆಯಲಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಕೈಗೊಳ್ಳಿ ಎಂದು ಪ್ರೋತ್ಸಾಹಿಸಿದರು.
 ಇದೇ ವೇಳೆ ಕ್ಲಸ್ಟರ್ ಮಟ್ಟದಲ್ಲಿ ಬಹುಮಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾದ 22 ಹಾಗೂ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ 9 ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
 ಶಾಲಾ ಆಡಳಿತ ಮಂಡಳಿಯ ಹರೀಶ್‌ಬಾಬು , ಮುಖ್ಯಶಿಕ್ಷಕರಾದ ಮಾಲಾ, ಗಾಯತ್ರಿ, ಪ್ರಕಾಶ್, ದೈಹಿಕ ಶಿಕ್ಷಣ ವಿಭಾಗದ ನಾಗರಾಜ್, ರಾಹುಲ್, ಇಂದ್ರಮ್ಮ, ಶರ್ಮಿಳಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net