ಸಿದ್ಧಗಂಗಾ ಸಂಸ್ಥೆಯ ವಿದ್ಯಾರ್ಥಿನಿಗೆ ವಿಶೇಷ ಸನ್ಮಾನ

dvg-siddaganga-27.jpg
Published on

ದಾವಣಗೆರೆ : ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 620ಕ್ಕಿಂತ ಹೆಚ್ಚು ಮತ್ತು ವಿಜ್ಞಾನದಲ್ಲಿ 100ಕ್ಕೆ 100 ಅಂಕ ಗಳಿಸಿದ ಪರಿಶಿಷ್ಟ ವರ್ಗದ ಮಕ್ಕಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯಂದು ವಿಜ್ಞಾನ ಮತ್ತು ತಂತ್ರಜ್ಞಾನ ಕೇಂದ್ರ ಸಚಿವಾಲಯದ ವತಿಯಿಂದ ಬೆಂಗಳೂರಿನ ಸಿ.ಎಸ್.ಐ.ಆರ್. ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಯಲ್ಲಿ ಸನ್ಮಾನ ಏರ್ಪಡಿಸಲಾಗಿತ್ತು.
 ಅಂದಿನ ಕಾರ್ಯಕ್ರಮದಲ್ಲಿ ನಗರದ ಸಿದ್ಧಗಂಗಾ ಪ್ರೌಢಶಾಲೆಯ ಭೂಮಿಕಾ ಬಸವರಾಜ ಮುತ್ತಗಿಯನ್ನೂ ಸನ್ಮಾನಿಸಲಾಯಿತು. ಸನ್ಮಾನಿತರಿಗೆ ಐದು ಸಾವಿರ ರೂ. ನಗದು ಬಹುಮಾನ, ಜತೆಗೆ ಸಿ.ಎಸ್.ಆರ್.ಪಿ. ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಂತ್ರಜ್ಞಾನದ ಎಲ್ಲ ವಿಭಾಗಗಳಿಗೆ ಭೇಟಿ ನೀಡುವ ಅವಕಾಶ ನೀಡಲಾಯಿತು.
 ಆ ಮೂಲಕ ಪ್ರತಿಭಾವಂತ ಮಕ್ಕಳಲ್ಲಿ ವೈಜ್ಞಾನಿಕ ಮತ್ತು ತಾಂತ್ರಿಕ ವಿಕಸನದ ಬಗ್ಗೆ ತಿಳಿವಳಿಕೆ ಹಾಗೂ ಆಸಕ್ತಿ ಮೂಡಿಸಲು ಎರಡು ದಿನಗಳ ವೀಕ್ಷಣಾ ಕಾರ್ಯಕ್ರಮ ಮತ್ತು ವಿಜ್ಞಾನಿಗಳನ್ನು ಭೇಟಿಯಾಗುವ ಅವಕಾಶ ಕಲ್ಪಿಸಿಕೊಡಲಾಯಿತು. ವಿದ್ಯಾರ್ಥಿನಿಯ ಈ ಸಾಧನೆಗೆ ಸಿದ್ಧಗಂಗಾ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net