

ದಾವಣಗೆರೆ : ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ಜತೆಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಆಗ್ರಹಿಸಿದ್ದಾರೆ. ಘಟನೆಗೆ ಕಾರಣಗಳನ್ನು ಪತ್ತೆ ಮಾಡಿ, ಮತ್ತೆಂದೂ ಇಂತಹ ಅವಘಡಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ವಿಮಾನ ಅಪಘಾತದಲ್ಲಿ 240ಕ್ಕೂ ಅಧಿಕ ಮಂದಿ ಸಾವಿಗೀಡಾಗಿರುವುದಕ್ಕೆ ಕಂಬನಿ ಮಿಡಿದಿದ್ದಾರೆ.