

ದಾವಣಗೆರೆ : ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರು ದೇಶದ ಅರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣವಾಗಿದ್ದರು ಎಂದು ಕೇಂದ್ರದ ಮಾಜಿ ಸಚಿವ ಡಾ. ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ. ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದ ಅವರು ಹಣಕಾಸು ಸಚಿವಾಲಯದಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ, ಆರ್‌ಬಿಐ ಗವರ್ನರ್ ಆಗಿಯೂ ಕಾರ್ಯ ನಿರ್ವಹಿಸಿದ್ದರು. 1991ರಲ್ಲಿ ರಾಜ್ಯಸಭೆಗೆ ಪ್ರವೇಶಿಸುವ ಮೂಲಕ ರಾಜಕೀಯ ಜೀವನ ಆರಂಭಿಸಿ ಕೇವಲ 4 ತಿಂಗಳ ನಂತರ ಅಂದಿನ ಪ್ರಧಾನಿಯಾಗಿದ್ದ ಪಿ.ವಿ. ನರಸಿಂಹರಾವ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ನೇಮಕಗೊಂಡರು ಎಂದು ತಿಳಿಸಿದ್ದಾರೆ. ದೇಶದ ಪ್ರಧಾನಿಯಾಗಿ 2004 ರಿಂದ 2014ರ ವರೆಗೆ ಎರಡು ಅವಧಿಗೆ ಸೇವೆ ಸಲ್ಲಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.