ದಾವಣಗೆರೆ : ತಾಲೂಕಿನ ಆಲೂರು ಗ್ರಾಮದಲ್ಲಿ ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟಿದ್ದಾರೆ. ಹನುಮಂತಪ್ಪ (52) ಸಾವಿಗೀಡಾದವರು. ಸೋಮವಾರ ಜಮೀನಿನಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿದೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ಹನುಮಂತಪ್ಪ ಅವರನ್ನು ಅಕ್ಕಪಕ್ಕದ ಜಮೀನಿನ ರೈತರು ಗಮನಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.