ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಪಾಲಿಕೆ ಸದಸ್ಯರ ಭೇಟಿ

dvg visit nov 3
Published on

ದಾವಣಗೆರೆ: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಕಸ ವಿಲೇವಾರಿಯಲ್ಲಿ ಆಗುತ್ತಿರುವ ತೊಂದರೆಗಳನ್ನು ಮನಗಂಡು ಪ್ರತಿಪಕ್ಷ ನಾಯಕ ಎ. ನಾಗರಾಜ್ ನೇತೃತ್ವದಲ್ಲಿ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಆವರಗೊಳ್ಳದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ಅಧಿಕಾರಿಗಳಿಂದ ಮಾಹಿತಿ ಪಡೆದು, ನಗರದಲ್ಲಿ ಪ್ರತಿದಿನ 160 ರಿಂದ 165 ಟನ್ ಕಸ ಸಂಗ್ರಹವಾಗುತ್ತಿದೆ. ಆದರೆ ಕಳೆದ 15 ದಿನಗಳಿಂದ ಪ್ರತಿದಿನ ಕೇವಲ 120 ರಿಂದ 121 ಟನ್ ಮಾತ್ರ ಸಂಗ್ರಹವಾಗುತ್ತಿದೆ. ಕಸ ಸರಿಯಾಗಿ ಸಂಗ್ರಹವಾಗದೆ ನಗರದ ಸ್ವಚ್ಛತೆ ಮತ್ತು ನಾಗರಿಕರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಎ. ನಾಗರಾಜ್ ತಿಳಿಸಿದರು.

ಆರೋಗ್ಯ ಅಧಿಕಾರಿಗಳ ಸಭೆ ಕರೆದು ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಆಯುಕ್ತ ವಿಶ್ವನಾಥ್ ಮುದಜ್ಜಿ ಉತ್ತರಿಸಿದರು.

ಆವರಗೊಳ್ಳಕ್ಕೆ ಹೋಗುವ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಭಾರಿ ವಾಹನಗಳ ಮೂಲಕ ಕಸ ಸಾಗಾಣಿಕೆಗೆ ತೊಂದರೆಯಾಗುತ್ತಿದ್ದು ಟ್ರ್ಯಾಕ್ಟರ್‌ಗಳನ್ನು ಹೆಚ್ಚು ಬಳಸಿ ಕಸ ವಿಲೇವಾರಿ ಮಾಡಬೇಕು ಎಂದು ಆಯುಕ್ತರಿಗೆ ಹೇಳಿದರು.

ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಕೆ. ಚಮನ್ ಸಾಬ್, ಜೆ.ಡಿ. ಪ್ರಕಾಶ್, ವಿನಾಯಕ ಪೈಲ್ವಾನ್, ಸೈಯದ್ ಚಾರ್ಲಿ ಹಾಗೂ ಕಾಂಗ್ರೆಸ್ ಮುಖಂಡ ಉಮೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net