ಅಭ್ಯರ್ಥಿಗಳು ಶಿಕ್ಷಕರ ಸಮಸ್ಯೆ ಕುರಿತು ಧ್ವನಿ ಎತ್ತಲಿ

dvg Rajashekhara N oct 8
Published on

ದಾವಣಗೆರೆ: ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಕೋವಿಡ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಏಕೆ ಧ್ವನಿಯಾಗುತ್ತಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಎನ್. ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರೊನಾ ಸಮಸ್ಯಯಿಂದಾಗಿ ಪದವೀಧರ ಯುವಕರು, ಖಾಸಗಿ ಶಾಲಾ ಶಿಕ್ಷಕರು, ಕಾಲೇಜು ಉಪನ್ಯಾಸಕರು, ಅತಿಥಿ ಉಪನ್ಯಾಸಕರು ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ. ಅನೇಕ ಶಿಕ್ಷಕರು ತರಕಾರಿ, ಹಣ್ಣು ಮಾರಾಟ ಮಾಡಿ, ದಿನಗೂಲಿ ಕೆಲಸ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.

ನಮ್ಮ ಜಿಲ್ಲೆಯೊಂದರಲ್ಲೇ ನೂರಾರು ಅನುದಾನ ರಹಿತ ಖಾಸಗಿ ಶಾಲಾ ಕಾಲೇಜುಗಳಿವೆ. ಅಭ್ಯರ್ಥಿಗಳು ವಿದ್ಯಾ ಸಂಸ್ಥೆಗಳೊಂದಿಗೆ, ಸರ್ಕಾರದೊಂದಿಗೆ ಚರ್ಚಿಸಿ ಶಿಕ್ಷಕರಿಗೆ, ಉಪನ್ಯಾಸಕರಿಗೆ ಇತರೆ ನೌಕರರಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net