ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ

dvg-sports-agent-news.jpg
Published on

ದಾವಣಗೆರೆ  : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ 2025-26ನೇ ಸಾಲಿನ ಚಿಕ್ಕಗಂಗೂರು ಮತ್ತು ಹೆಬ್ಬಳಗೆರೆ ಕ್ಲಸ್ಟರ್‌ಗಳ ವಲಯಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಚನ್ನಗಿರಿ ತಾಲೂಕು ಚಿಕ್ಕಗಂಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.  ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಿಯಾಂಕ ಸಿದ್ದಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಮರಿಯಪ್ಪ, ಎಚ್.ಎಸ್. ರಾಜಪ್ಪ, ಗೌರಮ್ಮ, ರಾಧಮ್ಮ, ರಾಜೇಶ್, ಭೈರಪ್ಪ, ಪಾಲಾಕ್ಷಪ್ಪ, ಎಸ್. ರಾಮಪ್ಪ, ಜಿ.ಬಿ. ಯೋಗರಾಜ್ ಮುಖ್ಯ ಅತಿಥಿಗಳಾಗಿದ್ದರು.  ಯರಗಟ್ಟಿಹಳ್ಳಿ ಶಾಲೆಯ ಮುಖ್ಯ ಶಿಕ್ಷಕ ಎಚ್.ಎಸ್. ಪ್ರಭಾಕರ್ ಸ್ವಾಗತಿಸಿದರು. ಸಿಆರ್‌ಪಿ ಗಣೇಶ್ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಎಸ್. ದೇವೇಂದ್ರಪ್ಪ ವಂದಿಸಿದರು. ಬಿ.ಎಸ್. ಅಶೋಕ್ ನಿರೂಪಿಸಿದರು. ಶಾಲಾ ಮಕ್ಕಳು ಪ್ರಾರ್ಥಿಸಿದರು.  

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net