

ದಾವಣಗೆರೆ : ಬಿ.ಎಸ್. ಚನ್ನಬಸಪ್ಪ ಆ್ಯಂಡ್ ಸನ್ಸ್ ಹಾಗೂ ದಾವಣಗೆರೆ ಚೆಸ್ ಅಸೋಸಿಯೇಷನ್ ಸಹಯೋಗದಲ್ಲಿ ಚೆಸ್ ಪಂದ್ಯಾವಳಿ ಆಯೋಜಿಸುವ ಮೂಲಕ ವಿಶ್ವ ಚೆಸ್ ದಿನ ಆಚರಿಸಲಾಯಿತು.
ನಗರದ ಡೆಂಟಲ್ ಕಾಲೇಜು ರಸ್ತೆಯ ಬಿ.ಎಸ್.ಚನ್ನಬಸಪ್ಪ ಆ್ಯಂಡ್ ಸನ್ಸ್ ಶಾಖೆಯಲ್ಲಿ ಹಮ್ಮಿಕೊಂಡಿದ್ದ ಚೆಸ್ ಪಂದ್ಯಾವಳಿಯಲ್ಲಿ ಸುಮಾರು 20 ಶಾಲೆಗಳ 80ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು.
ಚೆಸ್ ಅಸೋಸಿಯೇಷನ್ ಕಾರ್ಯದರ್ಶಿ ಯುವರಾಜ, ಬಿ.ಎಸ್.ಚನ್ನಬಸಪ್ಪ ಆ್ಯಂಡ್ ಸನ್ಸ್ ಅಂಗಡಿ ಮಾಲೀಕ ಬಿ.ಸಿ.ವಿವೇಕ್, ಸಿಬ್ಬಂದಿ ವರ್ಗ ಮತ್ತು ಗ್ರಾಹಕರು, ಮಕ್ಕಳ ಪಾಲಕರು ಮತ್ತು ಶಿಕ್ಷಕರು ಇದ್ದರು.
ಚೆಸ್ ಪಂದ್ಯಾವಳಿ ವಿಜೇತರಿಗೆ ಪಾರಿತೋಷಕ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು.