ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ

dvg-N.H.-Rajappa-22.jpg
Published on

ದಾವಣಗೆರೆ : ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದಾವಣಗೆರೆ ತಾಲೂಕು ಹಾಗೂ ಜಿಲ್ಲಾ ಕೇಂದ್ರ ವ್ಯಾಪ್ತಿಯಲ್ಲಿ 2024-29ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಘೋಷಣೆಯಾಗಿದೆ ಎಂದು ಜಿಲ್ಲಾಧ್ಯಕ್ಷ ಎನ್.ಎಚ್. ರಾಜಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ನಡೆದ ಸಂಘದ ಸಭೆಯಲ್ಲಿ ಈ ನಿರ್ಧಾರ ಮಾಡಲಾಯಿತು.

ತಾಲೂಕುಮಟ್ಟದ ಚುನಾವಣೆಗೆ ಜೂನ್ 24 ರಿಂದ 29ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಜುಲೈ 1 ರಂದು ನಾಮಪತ್ರ ಹಿಂಪಡೆಯಬಹುದಾಗಿದೆ. ಜುಲೈ 7 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 2.30 ರ ವರೆಗೆ ಮತದಾನ ನಡೆಯಲಿದ್ದು ಅದೇ ದಿನ ಫಲಿತಾಂಶ ಪ್ರಕಟಿಸಲಾಗುವುದು.

ಜಿಲ್ಲಾಮಟ್ಟದ ಚುನಾವಣೆಗೆ ಜುಲೈ 15 ರಿಂದ 19 ರ ವರೆಗೆ ನಾಮಪತ್ರ ಸಲ್ಲಿಸಬಹುದು. 20 ರಂದು ನಾಮಪತ್ರ ಹಿಂದಕ್ಕೆ ಪಡೆಯಬಹುದು. 21 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 2.30 ರ ವರೆಗೆ ಮತದಾನ ನಡೆಯಲಿದ್ದು ಅದೇ ದಿನದಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

ರಾಜ್ಯ ಉಪಾಧ್ಯಕ್ಷ ಬಿ. ಅಜಯ್, ಮಹಾಪೋಷಕ ಜಿ.ಸಿ. ಧನಂಜಯ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಮ್ಮನಗೌಡ ಕೆರೂರ, ಜಿಲ್ಲಾ ಉಪಾಧ್ಯಕ್ಷ ಕೆ.ಜಿ. ವಿಜಯ್ ಕುಮಾರ್, ತಾಲೂಕು ಅಧ್ಯಕ್ಷ ಆರ್.ಎಂ. ಸುರೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಸ್.ಜೆ. ಶಿವಪುರ ಸಭೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net