ಜಾತಿಗಣತಿ ವೇಳೆ ಶಿಕ್ಷಕನಿಗೆ ಹೃದಯಾಘಾತ

dvg-Prakash-Nayka-heart-attack.jpg
Published on

ದಾವಣಗೆರೆ :  ನಗರದ ವೆಂಕಾಭೋವಿ ಕಾಲನಿಯಲ್ಲಿ ಜಾತಿಗಣತಿ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕರೊಬ್ಬರು ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ತಾಲೂಕಿನ ಹಳೇ ಕಡ್ಲೇಬಾಳು ಗ್ರಾಮದ ದೈಹಿಕ ಶಿಕ್ಷಕ ಪ್ರಕಾಶ ನಾಯ್ಕ ಹೃದಯಾಘಾತಕ್ಕೆ ಒಳಗಾದವರು. ಸೋಮವಾರ ಸಂಜೆ ಸಮೀಕ್ಷೆ ನಡೆಸುತ್ತಿದ್ದಾಗ ಅವರು ಕುಸಿದು ಬಿದ್ದರು. ಜತೆಯಲ್ಲಿದ್ದವರು ಕೂಡಲೇ ಅವರನ್ನು ಖಾಸಗಿ ಆಸ್ಪತ್ತೆಗೆ ದಾಖಲಿಸಿದರು. ಅವರಿಗೆ ಸ್ಟಂಟ್ ಅಳವಡಿಸಲಾಗಿದೆ ಎಂದು ತಿಳಿದು ಬಂದಿದೆ.  ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ವೀರೇಶ ಒಡೇನಪುರ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಸರ್ಕಾರದಿಂದ ಅವರ ಚಿಕಿತ್ಸಾ ವೆಚ್ಚವನ್ನು ಭರಿಸುವ ಕುರಿತು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು.  ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಪ್ರಸ್ತಾವನೆ ಕಳಿಸಿಕೊಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.  ಮೃತಪಟ್ಟ 3 ಪ್ರಕರಣಗಳಲ್ಲಿ 15 ಲಕ್ಷ ರೂ. ಪರಿಹಾರ ನೀಡಲು ಆಯೋಗ ಒಪ್ಪಿದೆ ಎಂದು ತಿಳಿದು ಬಂದಿದೆ. ಹೃದಯಾಘಾತ ಆಗಿರುವುದು, ನಾಯಿ ಕಚ್ಚಿದ ಪ್ರಕರಣಗಳ ಬಗ್ಗೆ ನಾಳೆ ನಡೆಯುವ ಸಭೆಯಲ್ಲಿ ಚರ್ಚೆಗೆ ಬರಲಿದೆ. ಈಗಾಗಲೇ ಪ್ರಸ್ತಾವನೆ ಕಳಿಸಿರುವುದಾಗಿ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net