ಜೀವನ ಕೌಶಲ ಕುರಿತು ತರಬೇತಿ ಕಾರ್ಯಕ್ರಮ

dvg-gmit-06.jpg
Published on

ದಾವಣಗೆರೆ : ನಗರದ ಜಿ.ಎಂ. ವಿಶ್ವವಿದ್ಯಾಲಯದ ಮೊದಲ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮೂರು ದಿನಗಳ ಜೀವನ ಕೌಶಲ ತರಬೇತಿ ಕಾರ್ಯಕ್ರಮದ ಉದ್ಘಾಟನೆ ಗುರುವಾರ ನಡೆಯಿತು.
 ಈ ಕಾರ್ಯಕ್ರಮವನ್ನು ಪುಣೆ ಮೂಲದ ತರಬೇತಿ ಸಂಸ್ಥೆಯಾದ ಜಿಟಿಟಿ ಫೌಂಡೇಶನ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ಟಿ.ಆರ್. ತೇಜಸ್ವಿ ಕಟ್ಟಿಮನಿ ತಿಳಿಸಿದರು.
 ಮೊದಲ ವರ್ಷದಿಂದಲೇ ಎಲ್ಲ ವಿಭಾಗದ ವಿದ್ಯಾರ್ಥಿಗಳು ಕೈಗಾರಿಕಾ ಕೌಶಲ ಅಭಿವೃದ್ಧಿ ತರಬೇತಿಗಳಲ್ಲಿ ಪಾಲ್ಗೊಂಡು ಹೆಚ್ಚಿನ ಜ್ಞಾನವನ್ನು ಹಾಗೂ ಮುಂಬರುವ ಕಂಪನಿಗಳ ಸಂದರ್ಶನ ಪ್ರಕ್ರಿಯೆಗೆ ಅನುಕೂಲಕರ ಆಗುವಂತೆ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.
 ಮೂರು ದಿನಗಳ ತರಬೇತಿ ಕಾರ್ಯಕ್ರಮವು 1ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಮತ್ತು ವೃತ್ತಿಪರ ಜಗತ್ತಿನಲ್ಲಿ ಯಶಸ್ವಿ ಪರಿವರ್ತನೆಗೆ ಅಗತ್ಯವಾದ ಜೀವನ ಕೌಶಲಗಳೊಂದಿಗೆ ಸಜ್ಜುಗೊಳಿಸುವ ಗುರಿಯನ್ನು ಹೊಂದಿರುವ ವೈವಿಧ್ಯಮಯ ಕಾರ್ಯಾಗಾರಗಳು, ಸಂವಾದಾತ್ಮಕ ಅವಧಿಗಳು ಮತ್ತು ಪ್ರಾಯೋಗಿಕ ಚಟುವಟಿಕೆಗಳನ್ನು ಒಳಗೊಂಡಿದೆ ಎಂದು ಜಿಎಂ ವಿಶ್ವವಿದ್ಯಾಲಯದ ಡೀನ್ ಡಾ. ಎಸ್.ವಿ. ಪ್ರಕಾಶ್ ತಿಳಿಸಿದರು.
 ಜಿಟಿಟಿ ಫೌಂಡೇಶನ್ ತರಬೇತುದಾರರಾದ ಧ್ರುವ ದಾಸ್ ಬಿನಾನಿ, ಎಂ. ಅನಿತಾ ರಾಜ್, ಎಚ್.ಕೆ. ದಾಮೋದರ್ ರಾವ್, ಕೆ.ಎ. ಆದಿಕೇಶವ ಪ್ರಕಾಶ್, ಅಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net