ವೃದ್ಧನಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ನ್ಯಾಯಾಧೀಶೆ

dvg-judge-2.jpg
Published on

ದಾವಣಗೆರೆ :  ರಸ್ತೆ ಬದಿಯಲ್ಲಿ ನಿತ್ರಾಣಗೊಂಡು ಬಿದ್ದಿದ್ದ ವೃದ್ಧರೊಬ್ಬರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಡಿ.ಕೆ. ವೇಲಾ, ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.  ನ್ಯಾಯಾಧೀಶೆ ಶನಿವಾರ ಮಧ್ಯಾಹ್ನ ಹರಿಹರ ನ್ಯಾಯಾಲಯಕ್ಕೆ ತೆರಳುತ್ತಿದ್ದ ವೇಳೆ, ದೊಡ್ಡಬಾತಿ ಸಮೀಪದ ಮಂದಾರ ಶಾಲೆಯ ಹತ್ತಿರದ ಮುಖ್ಯ ರಸ್ತೆಯಲ್ಲಿ ವೃದ್ಧರೊಬ್ಬರು ನಿತ್ರಾಣಗೊಂಡು ರಸ್ತೆ ಬದಿಯಲ್ಲೇ ಬಿದ್ದಿದ್ದರು.  ಇದನ್ನು ಕಂಡು ನ್ಯಾಯಾಧೀಶೆ ಅವರನ್ನು ಹರಿಹರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು. ಈ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೃದ್ಧನು ಹರಪನಹಳ್ಳಿ ತಾಲೂಕಿನ ತೆಲಗಿ ಗ್ರಾಮದ ಕರಿಯಪ್ಪ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net