

ದಾವಣಗೆರೆ : ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ವಲಯ ಅರಣ್ಯಾಧಿಕಾರಿ ಕಚೇರಿ ಮುಂದಿನ ರಸ್ತೆ ಬದಿಯ ಗಂಧದ ಮರವೊಂದನ್ನು ಕತ್ತರಿಸಿದ ಪ್ರಕರಣ ಬೆಳಕಿಗೆ ಬಂದಿದೆ. ರಜಾ ದಿನವಾದ ಎರಡನೇ ಶನಿವಾರದಂದು ಈ ಘಟನೆ ನಡೆದಿದೆ. ವಿಷಯ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಎಫ್.ಐ.ಆರ್ ದಾಖಲಿಸಿಕೊಂಡಿದ್ದಾರೆ. ಅದಾದ ನಂತರ, ಕತ್ತರಿಸಿದ ಮರದ ತುಂಡುಗಳನ್ನು ವ್ಯಕ್ತಿಯೊಬ್ಬರು ಬಸವನಗರ ಠಾಣೆಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.