ಪ್ರೊ. ರಮೇಶ್ ನೂತನ ಪರೀಕ್ಷಾಂಗ ಕುಲಸಚಿವ

dvg-Prof.-C.K.-Ramesh-20.jpg
Published on

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ನೂತನ ಪರೀಕ್ಷಾಂಗ ಕುಲಸಚಿವರಾಗಿ ಪ್ರೊ. ಸಿ.ಕೆ. ರಮೇಶ್ ನೇಮಕಗೊಂಡಿದ್ದಾರೆ.
 ಇದುವರೆಗೆ ಆ ಹುದ್ದೆಯಲ್ಲಿದ್ದ ಡಾ. ಕೆ. ಶಿವಶಂಕರ ಅವರಿಂದ ಪ್ರೊ. ರಮೇಶ್ ಅಧಿಕಾರ ಸ್ವೀಕರಿಸಿದರು. ಅವರು ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. ಡಾ. ಶಿವಶಂಕರ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ತಮ್ಮ ಮಾತೃ ವಿಭಾಗಕ್ಕೆ ವಾಪಸಾದರು.
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net