ದಾವಣಗೆರೆ ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

images.jpg
Published on

ದಾವಣಗೆರೆ: ಬ್ಯಾಂಕಿಂಗ್ ಮತ್ತು ವಿಮಾ ವಲಯದಲ್ಲಿ ಸುಸ್ಥಿರತೆ ಮತ್ತು ತಂತ್ರಜ್ಞಾನ: ಸವಾಲುಗಳು ಮತ್ತು ಅವಕಾಶಗಳು ಕುರಿತು ದಾವಣಗೆರೆ ವಿಶ್ವವಿದ್ಯಾನಿಲಯ ನಿರ್ವಹಣಾ ಅಧ್ಯಯನ ವಿಭಾಗದ ವತಿಯಿಂದ ಸೆಪ್ಟೆಂಬರ್ 10ರಂದು ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ.

ವಿಶ್ವವಿದ್ಯಾನಿಲಯ ಆವರಣದ ಎಂಬಿಎ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಉದ್ಘಾಟಿಸುವರು. ದಾವಣಗೆರೆ ವಿವಿ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸುವರು. ಬೆಳಗಾವಿ ರಾಣಿ ಚನ್ನಮ್ಮ ವಿವಿ ಪ್ರಾಧ್ಯಾಪಕ ಡಾ.ಎಸ್.ಸಿ.ಪಾಟೀಲ, ಎಸ್ ಬಿಐ ಪ್ರಾದೇಶಿಕ ಪ್ರಬಂಧಕ ಮಾನವಕುಮಾರ, ಕುಲಸಚಿವ ಪ್ರೊ.ಆರ್.ಶಶಿಧರ್, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ, ಹಣಕಾಸು ಅಧಿಕಾರಿ ಧ್ಯಾಮನಗೌಡ ಮುದ್ದನಗೌಡ್ರ ಅತಿಥಿಗಳಾಗಿ ಭಾಗವಹಿಸುವರು ಎಂದು ಕಾರ್ಯಕ್ರಮ ಸಂಯೋಜಕರಾದ ಡಾ.ಆರ್.ಸುನಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net