

ದಾವಣಗೆರೆ: ದಾವಣಗೆರೆ ವಿವಿಯಲ್ಲಿ ಇತ್ತೀಚೆಗೆ ಪ. ಜಾತಿ ಮತ್ತು ಪ. ಪಂಗಡ ವಿದ್ಯಾರ್ಥಿ ಘಟಕದ ನೇತೃತ್ವದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿತ್ತು. ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿವಿ ಇಂಗ್ಲೀಷ್ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಚ್.ಆರ್. ಮದಕರಿ ನಾಯಕ ಮಾತನಾಡಿ, ಮಹರ್ಷಿ ವಾಲ್ಮೀಕಿಯು ಭಾರತದ ಆದಿಕವಿಯಾಗಿದ್ದು, ಅದ್ಭುತ ರಾಮಾಯಣ ಮಹಾಕಾವ್ಯ ರಚಿಸಿದ್ದಾರೆ. ಅವರ ಜೀವನ ನೊಂದವರಿಗೆ ಸ್ಪೂರ್ತಿಯಾಗಿದೆ ಎಂದು ತಿಳಿಸಿದರು. ವಿವಿ ಕುಲಸಚಿವ ಪ್ರೊ.ಯು.ಎಸ್. ಮಹಾಬಲೇಶ್ವರ, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ್ರ, ಸಂಚಾಲಕ ಡಾ. ಎಂ.ಎಚ್. ನಿರಂಜನ್, ಹಿರಿಯ ಪ್ರಾಧ್ಯಾಪಕ ಪ್ರೊ. ಪಿ. ಲಕ್ಷ್ಮಣ್ ಹಾಗೂ ಸಿಂಡಿಕೇಟ್ ಸದಸ್ಯರು ಮತ್ತು ವಿದ್ಯಾವಿಷಯಕ ಪರಿಷತ್ ಸದಸ್ಯರು ಮತ್ತು ಬೋಧಕ ಮತ್ತು ಬೋಧಕೇತರ ವರ್ಗದವರು ಇದ್ದರು.