ಮಹರ್ಷಿ ವಾಲ್ಮೀಕಿ ಜಯಂತಿ ಸರಳ ಆಚರಣೆಗೆ ನಿರ್ಧಾರ

dvg valmiki oct 22
Published on

ದಾವಣಗೆರೆ: ಚುನಾವಣೆ ನೀತಿ ಸಂಹಿತೆ ಹಾಗೂ ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಅ.31ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ತಿಳಿಸಿದರು.

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಜಿಲ್ಲಾಡಳಿತ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ತುಂಗಭದ್ರಾ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆದಷ್ಟು ಗುಂಪುಗೂಡದೆ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಹಾಗೂ ನೀತಿ ಸಂಹಿತೆಯನ್ನು ಪಾಲಿಸಲಾಗುವುದು ಎಂದರು.

ಜಿಪಂ ಸದಸ್ಯ ಕೆ.ಎಚ್.ಓಬಳಪ್ಪ ಮಾತನಾಡಿ, ಕಳೆದ ಬಾರಿ ಪಾದಯಾತ್ರೆ ಕೈಗೊಂಡು ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗಿತ್ತು. ಆದರೆ ಈ ಬಾರಿ ಕೋವಿಡ್ ವೈರಸ್ ಹರಡುವುದನ್ನು ತಪ್ಪಿಸಲು ಸರಳವಾಗಿ ಆಚರಿಸುವುದು ಸೂಕ್ತ ಎಂದು ಸಲಹೆ ನೀಡಿದರು.

ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಡಿವೈಎಸ್ಪಿ ನಾಗೇಶ್ ಐತಾಳ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸುರೇಶ್ ರೆಡ್ಡಿ, ನಾಯಕ ಸಮಾಜದ ಮುಖಂಡರಾದ ಆಂಜನೇಯ ಗುರೂಜಿ, ಬಿ.ವೀರಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net