

ದಾವಣಗೆರೆ : ನಗರದ ಎಸ್.ಕೆ.ಪಿ. ರಸ್ತೆಯಲ್ಲಿನ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ವತಿಯಿಂದ ಶನಿವಾರ ವಾಸವಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಬೆಳಗ್ಗೆ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸೇವಾಕರ್ತ ದಂಪತಿಗಳಿಂದ ಕ್ಷೀರಾಭಿಷೇಕ ನೆರವೇರಿತು. ನಂತರ ವಾಸವಿ ತೊಟ್ಟಿಲು ಸೇವೆ ಹಮ್ಮಿಕೊಳ್ಳಲಾಗಿತ್ತು. ವಿವಿಧ ಅಂಗ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ದಾನಿಗಳಿಗೆ ಗೌರವಿಸಲಾಯಿತು. ಮಧ್ಯಾಹ್ನ ಮಹಾ ಮಂಗಳಾರತಿ ನಂತರ ಅನ್ನ ಸಂತರ್ಪಣೆ ನಡೆಯಿತು.
ಸಂಜೆ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಎಂ.ಜಿ. ರಸ್ತೆ, ಮಂಡಿಪೇಟೆ, ವಿಜಯಲಕ್ಷ್ಮೀ ರಸ್ತೆಯಲ್ಲಿ ಸಾಗಿ ದೇಗುಲಕ್ಕೆ ವಾಪಸಾಯಿತು.
ಉತ್ಸವದ ಅಂಗವಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಆರ್ಥಿಕ ನೆರವು ನೀಡಲಾಯಿತು. 1 ಸಾವಿರಕ್ಕೂ ಹೆಚ್ಚು ಜನರಿಗೆ ಮಜ್ಜಿಗೆ ವಿತರಿಸಲಾಯಿತು. 10 ದಿನಗಳ ಉತ್ಸವದಲ್ಲಿ ದೇವಿಗೆ ಪ್ರತಿ ದಿನ ವಿಶೇಷ ಅಲಂಕಾರ ಮಾಡಲಾಯಿತು.