ಹಿಂದುಗಳ ಭಾವನೆಯೊಂದಿಗೆ ಸರ್ಕಾರದ ಚೆಲ್ಲಾಟ

dvg-renukacharya_20241022192428623.jpg
Published on

ದಾವಣಗೆರೆ : ರಾಜ್ಯ ಸರ್ಕಾರ ಹಿಂದುಗಳ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.  ನಗರದಲ್ಲಿ ಸೋಮವಾರ ಹಿಂದು ಜಾಗರಣ ವೇದಿಕೆ ಸಂಚಾಲಕ ಸತೀಶ್ ಪೂಜಾರ್ ಮನೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಭಯೋತ್ಪಾದಕರ ಸರ್ಕಾರವಿದೆ, ಅದು ಐಸಿಯು ವಾರ್ಡ್‌ನಲ್ಲಿದೆ ಎಂದರು.  ಹಿಂದುತ್ವ ನಮ್ಮ ಉಸಿರು. ಪೊಲೀಸರು ಸತೀಶ್ ಪೂಜಾರ್ ಅವರನ್ನು ಅನಗತ್ಯವಾಗಿ ಬಂಧಿಸಿದ್ದರು. ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.  ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕೇಂದ್ರ ಸಚಿವೆ ಬಗ್ಗೆ ಹಗುರ ಮಾತುಗಳನ್ನಾಡಿದರೆ ಸುಮ್ಮನಿರಲ್ಲ. ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ನೀಡಿದರು.  ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ವರಿಷ್ಠರು ನಿರ್ಧಾರ ಮಾಡುತ್ತಾರೆ. ಆದರೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಸಿ.ಪಿ. ಯೋಗೀಶ್ವರ್ ಪಕ್ಷದಲ್ಲಿ ಇರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net