ಸಾರ್ವಜನಿಕರನ್ನು ಅಲೆದಾಡಿಸದೆ ಕೆಲಸ ಮಾಡಿಕೊಡಿ

jlr-dc-20.jpg
Published on

ಜಗಳೂರು : ಅಧಿಕಾರಿಗಳು ಕಚೇರಿಗೆ ಬರುವ ಸಾರ್ವಜನಿಕರನ್ನು ವಿನಾಕಾರಣ ಅಲೆದಾಡಿಸದೆ ಅವರ ಕೆಲಸಗಳನ್ನು ನಿಗದಿತ ಸಮಯದಲ್ಲಿ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ.ಜಿ.ಎಂ. ಗಂಗಾಧರಸ್ವಾಮಿ ಸೂಚಿಸಿದರು.  ಪಟ್ಟಣದ ತಾಲೂಕು ಕಚೇರಿಗೆ ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಅವರು ಮಾತನಾಡಿದರು.  ದಾವಣಗೆರೆಗೆ ನೂತನ ಜಿಲ್ಲಾಧಿಕಾರಿಯಾಗಿ ಬಂದಿದ್ದರಿಂದ ಎಲ್ಲ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ, ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ. ಜಗಳೂರಿನಲ್ಲಿ ಉತ್ತಮ ಕಟ್ಟಡ, ಸಿಬ್ಬಂದಿ ವರ್ಗವಿದೆ ಎಂದು ಪ್ರಶಂಸಿಸಿದರು.  ಈ ಭಾಗದ ಎಂಟು ಗ್ರಾಪಂಗಳಲ್ಲಿ  ಫಸಲ್ ಬಿಮಾ ಯೋಜನೆ ಬಂದಿಲ್ಲ ಎಂದು ರೈತರು ಮನವಿ ಮಾಡಿದ್ದಾರೆ. ಈ ಸಂಬಂಧ ಅಧಿಕಾರಿಗಳ ಸಭೆ ಕರೆದು ವಿಳಂಬಕ್ಕೆ ಕಾರಣ ಹಾಗೂ ಮುಂದೆ ಸಮಸ್ಯೆ ಪರಿಹಾರಕ್ಕೆ ಏನು ಮಾಡಬೇಕು ಎನ್ನುವುದರ ಬಗ್ಗೆ ಚರ್ಚಿಸಿ ಪರಿಹಾರ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.  ನಂತರ, ತಹಸೀಲ್ದಾರ್ ಕೊಠಡಿ, ಭೂಮಿ ಕೇಂದ್ರ, ಆರ್‌ಆರ್‌ಟಿ ವಿಭಾಗ, ಎಜಿಎಸ್‌ಕೆ, ಸಬ್ ರಿಜಿಸ್ಟ್ರಾರ್ ಕಚೇರಿ, ಸರ್ವೇ ಕಚೇರಿ, ದಾಖಲೆಗಳ ವಿಭಾಗ, ಆಹಾರ ಶಾಖೆ, ಚುನಾವಣಾ ಕಚೇರಿಗೆ ಖುದ್ದು ಭೇಟಿ ನೀಡಿ, ಪರಿಶೀಲಿಸಿದರು.  ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ, ಗ್ರೇಡ್-2 ತಹಸೀಲ್ದಾರ್ ಮಂಜಾನಂದ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net