ಜಿಲ್ಲಾಸ್ಪತ್ರೆಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಭೇಟಿ

dvg-mp-visit.jpg
Published on

ದಾವಣಗೆರೆ :  ವೈದ್ಯರು ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಬುಧವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿರುವವರ ಯೋಗಕ್ಷೇಮ ವಿಚಾರಿಸಿದರು.  ಆಸ್ಪತ್ರೆಯ ಕಟ್ಟಡದ ಸ್ಥಿತಿಗತಿ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಕಟ್ಟಡ ಬಹಳ ಹಳೆಯದಾಗಿದ್ದು ಕೆಲವು ಕಡೆ ಶಿಥಿಲವಾಗಿದೆ. ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು.  ಸರ್ಕಾರಿ ಆಸ್ಪತ್ರೆಗೆ ಬರುವ ಜನರು ಸಾಮಾನ್ಯವಾಗಿ ಆರ್ಥಿಕವಾಗಿ ಹಿಂದುಳಿದವರಾಗಿದ್ದು, ಅವರಿಗೆ ಹೊರೆಯಾಗದಂತೆ ಬಾಹ್ಯ ಮೂಲಗಳಿಂದ ಮಾತ್ರೆ, ಔಷಧಗಳನ್ನು ಮತ್ತು ಪರೀಕ್ಷಾ ವರದಿಗಳನ್ನು ತರುವಂತೆ ಹೇಳಬಾರದು ಎಂದು ಸೂಚಿಸಿದರು.  ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು, ತರಬೇತಿ ನಿರತ ವೈದ್ಯರಿಗೆ ಮೂಲ ಸೌಲಭ್ಯಗಳೊಂದಿಗೆ ಸೂಕ್ತ ರಕ್ಷಣೆ ಒದಗಿಸಲು ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಯಲ್ಲಿ ಕೇವಲ ಮೂವರು ಪೊಲೀಸ್ ಸಿಬ್ಬಂದಿ ಇದ್ದು, ಇನ್ನು 5-6 ಪೊಲೀಸರನ್ನು ನೇಮಕ ಮಾಡಬೇಕು ಎಂದು ತಿಳಿಸಿದರು.  ಆಸ್ಪತ್ರೆಯ ಕ್ಯಾಂಟೀನ್‌ಗೂ ಭೇಟಿ ನೀಡಿದ ಪ್ರಭಾ ಮಲ್ಲಿಕಾರ್ಜುನ್, ಅಲ್ಲಿ ನಿರ್ವಹಣೆಯ ಲೋಪದ ಬಗ್ಗೆ ಬೇಸರ ವ್ಯಕ್ತಪಡಿಸಿ ಸರಿಪಡಿಸುವಂತೆ ತಾಕೀತು ಮಾಡಿದರು. ಜಿಲ್ಲಾ ಸರ್ಜನ್ ಡಾ.ನಾಗೇಂದ್ರಪ್ಪ ಹಾಗೂ ವೈದ್ಯರು, ಶುಶ್ರೂಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net