ಹೋಟೆಲ್ ಉದ್ದಿಮೆದಾರರಿಂದ ಮತದಾರರ ಜಾಗೃತಿ ಅಭಿಯಾನ

jagruti-1.jpg
Published on

ದಾವಣಗೆರೆ : ಮತದಾರರ ಜಾಗೃತಿ ಅಭಿಯಾನಕ್ಕೆ ದಾವಣಗೆರೆ ಹೋಟೆಲ್ ಉದ್ದಿಮೆದಾರರ ಸಂಘ ಕೈ ಜೋಡಿಸಿದೆ.
 ಮಹಾನಗರ ಪಾಲಿಕೆಯ ಆಯುಕ್ತೆ ರೇಣುಕಾ ಭಾನುವಾರ ಮತದಾನ ಜಾಗೃತಿ ಅಭಿಯಾನದ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದರು. ಪಾಲಿಕೆಯ ಆರೋಗ್ಯ ವಿಭಾಗದ ಸಿಬ್ಬಂದಿ ಸಹಕಾರದೊಂದಿಗೆ ಜನನಿಬಿಡ ಸ್ಥಳಗಳಲ್ಲಿ ಹಾಗೂ ನಗರದ ಪ್ರಮುಖ ವೃತ್ತಗಳಲ್ಲಿ ಪೋಸ್ಟ್‌ರ್‌ಗಳನ್ನು ಅಳವಡಿಸುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಯಿತು.
 ಹೋಟೆಲ್ ಉದ್ದಿಮೆದಾರರ ಸಂಘದ ಅಧ್ಯಕ್ಷ ಮೋತಿ ಆರ್. ಪರಮೇಶ್ವರ್, ಕಾರ್ಯದರ್ಶಿ ಬಿ.ಕೆ. ಸುಬ್ರಹ್ಮಣ್ಯ, ಕಾರ್ಯಕಾರಿ ಸಮಿತಿ ಸದಸ್ಯ ರಾಕೇಶ್ ಅಭಿಯಾನದಲ್ಲಿ ಭಾಗವಹಿಸಿದ್ದರು.
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net