ಸಮಜಾಯಿಷಿ ಕೇಳಿ ಶಾಮನೂರುಗೆ ಪತ್ರ

Shamanur-Shivashakarppa-dvg-south.jpg
Published on

ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಬಗ್ಗೆ ಕಾಂಗ್ರೆಸ್‌ನ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ನೀಡಿದ್ದ ಹೇಳಿಕೆಯ ಬಗ್ಗೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ, ಸಮಜಾಯಿಷಿ ನೀಡುವಂತೆ ಸಹಾಯಕ ಚುನಾವಣಾಧಿಕಾರಿ ತಿಳಿವಳಿಕೆ ಪತ್ರ ಬರೆದಿದ್ದಾರೆ.
 ಡಾ. ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವುದು ಹಾಗೂ ಮಾಧ್ಯಮಗಳಲ್ಲಿ ಆ ಬಗ್ಗೆ ವರದಿಯಾಗಿರುವುದನ್ನು ಸಹಾಯಕ ಚುನಾವಣಾಧಿಕಾರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
 ಇದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಸಮಜಾಯಿಷಿ ನೀಡಿದ್ದು, ನಾನು ಈ ರೀತಿ ಹೇಳಿಕೆ ಕೊಟ್ಟಿದ್ದೇನೆ ಎಂದು, ನನಗೆ ಆಗದವರು ದ್ವೇಷದಿಂದ ಸೃಷ್ಟಿಸಿ ಮಾಧ್ಯಮದಲ್ಲಿ ಹರಿಬಿಟ್ಟಿದ್ದಾರೆ ಎಂದು ಖಶಾಥಾ

ಎಲ್ಲ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತರಲ್ಲ ಎಂಬುದನ್ನು ನಮ್ಮ ಪಕ್ಷದವರಾದ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರು ಸಾಬೀತುಪಡಿಸಿದ್ದು ಅದೇ ರೀತಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲೂ ಸಹ ಮಹಿಳೆಯರೇ ಸ್ಪರ್ಧಿಸಿದ್ದು, ನಿಮ್ಮ ಸಮಸ್ಯೆಯನ್ನು ದೆಹಲಿಯ ವರೆಗೆ ತಲುಪಿಸುವವರಿಗೆ ಮತ ನೀಡಿ’ ಎಂದು ಹೇಳಿಕೆ ನೀಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
 ...
 
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net