ಬಾವಿಗೆ ಬಿದ್ದಿದ್ದ ವ್ಯಕ್ತಿಯ ರಕ್ಷಣೆ

dvg-well-1.jpg
Published on

ದಾವಣಗೆರೆ  : ತಾಲೂಕಿನ ಜಮ್ಮಾಪುರ ಗ್ರಾಮದ 50 ಅಡಿ ಆಳದ ಹಾಳು ಬಾವಿಗೆ ಆಯತಪ್ಪಿ ಬಿದ್ದಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.  ಜಮ್ಮಾಪುರದ ಕುಮಾರ್ ಎಂಬುವರು ಬುಧವಾರ ರಾತ್ರಿ ಗ್ರಾಮಕ್ಕೆ ತೆರಳುವಾಗ ರಸ್ತೆ ಬದಿಯ ಬಾವಿಗೆ ಬಿದ್ದಿದ್ದರು. ಬಾವಿ ಖಾಲಿ ಇರುವುದರಿಂದ ಅವರ ಸೊಂಟ, ಬೆನ್ನು ಮೂಳೆಗೆ ಬಲವಾದ ಪೆಟ್ಟು ಬಿದ್ದು ನರಳುತ್ತಿದ್ದರು.  ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಏಣಿಯ ಸಹಾಯದಿಂದ ಬಾವಿಗೆ ಇಳಿದು, ಗಾಯಗೊಂಡಿದ್ದ ವ್ಯಕ್ತಿಯನ್ನು ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದರು.  ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ನಾಗೇಶ್, ಅಗ್ನಿಶಾಮಕ ಠಾಣಾಧಿಕಾರಿ ಪ್ರೇಮಾನಂದ ಶೇಟ್, ಸಹಾಯಕ ಅಗ್ನಿಶಾಮಕ ಅಧಿಕಾರಿ ಭೀಮರಾವ್ ಉಪ್ಪಾರ, ಸಿಬ್ಬಂದಿ ಸುಭಾನ್, ಪ್ರದೀಪ್ ಕುಮಾರ್, ಪರಶುರಾಮ ಪೂಜಾರ, ಶಿವರಾಜ್ ಜಮಖಂಡಿ, ಗೋಪಾಲ್ ದಮಣೇಕರ, ಗಂಗಾ ನಾಯ್ಕ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net