ಎಸ್.ಎಸ್.ಗೆ ಶುಭಾಶಯಗಳ ಮಹಾಪೂರ

dvg-ssm.jpg
Published on

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ, ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಶಾಮನೂರು ಶಿವಶಂಕರಪ್ಪ ಅವರ 94ನೇ ಜನ್ಮದಿನದ ಹಿನ್ನೆಲೆಯಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿತು.
 ಸಾರ್ವಜನಿಕರು, ಬಂಧುಗಳು, ಅಧಿಕಾರಿ ವರ್ಗದವರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಬಾಪೂಜಿ ವಿದ್ಯಾಸಂಸ್ಥೆಯ ನೌಕರರು ಆಗಮಿಸಿ ಶುಭ ಕೋರಿದರು.
 ಶಾಸಕರಾದ ಡಿ.ಜಿ. ಶಾಂತನಗೌಡ, ಕೆ.ಎಸ್. ಬಸವಂತಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಪ್ರಧಾನ ಕಾರ‌್ಯದರ್ಶಿ ದಿನೇಶ್ ಕೆ. ಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯರು ಇನ್ನಿತರ ಜನಪ್ರತಿನಿಧಿಗಳು ಶುಭಾಶಯ ಹೇಳಿದರು.
 ಆಂಧ್ರ ಪ್ರದೇಶದ ಸಂಸದ ಮಹೇಶ್ ಕುಮಾರ್ ಯಾದವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಜಿ.ಪಂ. ಸಿಇಒ ಸುರೇಶ್ ಇಟ್ನಾಳ್ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಶುಭ ಹಾರೈಸಿದರು.
 ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ರಮಾನಂದ್, ಖಜಾಂಚಿ ನಿರಂಜನ್ ಹಾಗೂ ಆಡಳಿತ ಮಂಡಳಿ ಸದಸ್ಯರು, ವಿದ್ಯಾಸಂಸ್ಥೆಯ ವಿವಿಧ ಶಾಲಾ-ಕಾಲೇಜು ಮುಖ್ಯಸ್ಥರು, ಸಿಬ್ಬಂದಿ ಶುಭ ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net