30ಕ್ಕೆ ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ

blood
Published on

ದಾವಣಗೆರೆ: ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಪ್ರಸೂತಿ-ಸ್ತ್ರೀರೋಗ ವಿಭಾಗದಲ್ಲಿ ಜೂ.30ರಂದು ಬೆಳಗ್ಗೆ 11ಗಂಟೆಗೆ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಬೆಂಗಳೂರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ರಕ್ತ ಭಂಡಾರ, ಜಿಲ್ಲಾ ಚಿಗಟೇರಿ ಆಸ್ಪತ್ರೆ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಉದ್ಘಾಟಿಸುವರು.

ಡಿಎಚ್‌ಒ ಡಾ.ಎಚ್.ಎಸ್.ರಾಘವೇಂದ್ರ ಸ್ವಾಮಿ, ಜಿಪಂ ಸಿಇಒ ಪದ್ಮ್ಮಾ ಬಸವಂತಪ್ಪ, ಚಿಗಟೇರಿ ಆಸ್ಪತ್ರೆ ಅಧೀಕ್ಷಕ ಡಾ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಅಧೀಕ್ಷಕ ಡಾ.ಜೆ.ಬಿ.ನೀಲಕಂಠ ಇತರರು ಪಾಲ್ಗೊಳ್ಳುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net