ಹರಿಹರದ 11 ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ students

ಹರಿಹರ ನಗರದ ಶ್ರೀಮತಿ ಗಿರಿಯಮ್ಮ ಆರ್. ಕಾಂತಪ್ಪ ಶೆಟ್ಟಿ ಪ್ರೌಢಶಾಲೆ ವಿದ್ಯಾರ್ಥಿನಿಯರು ದಾವಣಗೆರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮೇಲಾಟದ ಕ್ರೀಡಾಕೂಟದಲ್ಲಿ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹರಿಹರ ನಗರದ ಶ್ರೀಮತಿ ಗಿರಿಯಮ್ಮ ಆರ್. ಕಾಂತಪ್ಪ ಶೆಟ್ಟಿ ಪ್ರೌಢಶಾಲೆ ವಿದ್ಯಾರ್ಥಿನಿಯರು ದಾವಣಗೆರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮೇಲಾಟದ ಕ್ರೀಡಾಕೂಟದಲ್ಲಿ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Published on

ಹರಿಹರ: ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಆರ್. ಕಾಂತಪ್ಪ ಶೆಟ್ಟಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅದ್ಭುತ ಪ್ರದರ್ಶನ ನೀಡುವ ಮೂಲಕ ಒಟ್ಟು 11 ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳು ಪಡೆದ ಫಲಿತಾಂಶದ ವಿವರಗಳು ಹೀಗಿವೆ:

ರಿಲೇ ತಂಡಕ್ಕೆ ಪ್ರಥಮ ಸ್ಥಾನ

ಇದಲ್ಲದೆ, 4x100 ಮೀ ರಿಲೇ ಓಟದಲ್ಲಿ ಶಾಲೆಯ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಈ ತಂಡದಲ್ಲಿ ರತ್ನಮ್ಮ, ಪಿ.ಕೆ. ಶ್ವೇತಾ, ಪಿ.ಎಚ್. ರಾಧಿಕಾ ಮತ್ತು ಎಚ್.ಬಿ. ಲಕ್ಷ್ಮೀ ಇದ್ದರು.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆ ಅಧ್ಯಕ್ಷರಾದ ಕೆ.ಎ. ಉಮಾ, ಕಾರ್ಯದರ್ಶಿ ಗಾಯತ್ರಿ ದೇವಿ, ಪ್ರೌಢಶಾಲೆ ಮುಖ್ಯಶಿಕ್ಷಕ ಬಿ.ಸಿ. ಬಸವರಾಜ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಬಿ.ಎಚ್. ಹನುಮಂತಪ್ಪ ಅವರು ಸಂತಸ ವ್ಯಕ್ತಪಡಿಸಿ, ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಲು ಶುಭ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net