ಶಾಸ್ತ್ರೀಯ ಸಂಗೀತ ಪರಂಪರೆಯ ಪ್ರತೀಕ

ದಾವಣಗೆರೆಯ ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂಗೀತ ಕಾರ್ಯಕ್ರಮದಲ್ಲಿ ಖ್ಯಾತ ಸಿತಾರ್ ವಾದಕ ಉಸ್ತಾದ್ ಶಫೀಕ್ ಖಾನ್ ಸಿತಾರ್ ವಾದನ ಪ್ರಸ್ತುತಪಡಿಸಿದರು. ತಬಲಾದಲ್ಲಿ ರೂಪಕ್ ಕಲ್ಲೂರ್ಕರ್ ಸಾಥ್ ನೀಡಿದರು.
ದಾವಣಗೆರೆಯ ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂಗೀತ ಕಾರ್ಯಕ್ರಮದಲ್ಲಿ ಖ್ಯಾತ ಸಿತಾರ್ ವಾದಕ ಉಸ್ತಾದ್ ಶಫೀಕ್ ಖಾನ್ ಸಿತಾರ್ ವಾದನ ಪ್ರಸ್ತುತಪಡಿಸಿದರು. ತಬಲಾದಲ್ಲಿ ರೂಪಕ್ ಕಲ್ಲೂರ್ಕರ್ ಸಾಥ್ ನೀಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಡೀನ್ ಮಂಜುನಾಥ ರಂಗರಾಜು ಹೇಳಿಕೆ
  • ಬಾಪೂಜಿ ಶಾಲೆಯಲ್ಲಿ ಸಂಗೀತ ಕಾರ್ಯಕ್ರಮ
ದಾವಣಗೆರೆ : ಭಾರತೀಯ ಶಾಸ್ತ್ರೀಯ ಸಂಗೀತವು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದೆ ಎಂದು ನಗರದ ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಡೀನ್ ಮಂಜುನಾಥ ರಂಗರಾಜು ಹೇಳಿದರು.
ಎಂ.ಸಿ.ಸಿ. ‘ಬಿ’ ಬ್ಲಾಕ್‌ನಲ್ಲಿರುವ ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ, ಸ್ಪಿಕ್ ಮ್ಯಾಕೇ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಭಾರತೀಯ ಶಾಸ್ತ್ರೀಯ ಸಂಗೀತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ರೀತಿಯ ಸಂಗೀತ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಕಲೆಯ ಬಗ್ಗೆ ಆಸಕ್ತಿ, ಸಂಸ್ಕೃತಿಯ ಬಗ್ಗೆ ಗೌರವ ಹಾಗೂ ಸೃಜನಶೀಲತೆಯನ್ನು ಬೆಳೆಸುತ್ತವೆ ಎಂದು ತಿಳಿಸಿದರು.
ಶಾಲೆಯ ಪ್ರಾಚಾರ್ಯೆ ಜಿ.ಎಸ್. ವನಿತಾ ಮಾತನಾಡಿ, ಪಠ್ಯ ಚಟುವಟಿಕೆಗಳ ಜತೆಗೆ ಭಾರತೀಯ ಕಲೆ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಿವೆ ಎಂದು ಅಭಿಪ್ರಾಯಪಟ್ಟರು.
ಶಾಲೆಯ ಸಂಯೋಜಕ ಪಿ.ವಿ. ಪ್ರಭು, ಲತಾ ಎಂ.ಎಸ್, ಶೀಭಾರಾಣಿ ಹಾಗೂ ಮನ್ಸೂರ್ ಕೆ.ಎಸ್. ಇದ್ದರು. ಕಾರ್ಯಕ್ರಮದ ಆಯೋಜನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು. ಜನನಿ ಜಯಣ್ಣ ಇಟಗಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಉದ್ದೇಶ ಹಾಗೂ ಭಾರತೀಯ ಶಾಸ್ತ್ರೀಯ ಸಂಗೀತ ಮತ್ತು ಸಂಸ್ಕೃತಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು.

ಸಿತಾರ್ ವಾದನದ ಮೋಡಿ

ಖ್ಯಾತ ಸಿತಾರ್ ವಾದಕ ಉಸ್ತಾದ್ ಶಫೀಕ್ ಖಾನ್ ಅವರು ಸಿತಾರ್‌ನ ವಿವಿಧ ರಾಗಗಳ ವೈಶಿಷ್ಟ್ಯ, ಸಂಗೀತದ ಸೂಕ್ಷ್ಮತೆ ಹಾಗೂ ಅದರ ಆಧ್ಯಾತ್ಮಿಕ ಆಯಾಮಗಳನ್ನು ಮನಮುಟ್ಟುವ ರೀತಿಯಲ್ಲಿ ಪರಿಚಯಿಸಿದರು.
ತಬಲಾದಲ್ಲಿ ರೂಪಕ್ ಕಲ್ಲೂರ್ಕರ್ ಅತ್ಯುತ್ತಮವಾಗಿ ಸಾಥ್ ನೀಡಿ ಸಂಗೀತ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಸಿತಾರ್ ಮತ್ತು ತಬಲಾದ ಸುಮಧುರ ಸಂಗಮವು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಮೋಡಿ ಮಾಡಿತು.
ಕಾರ್ಯಕ್ರಮದ ಬಳಿಕ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕಲಾವಿದರೊಂದಿಗೆ ಸಂವಾದ ನಡೆಸಿ ತಮ್ಮ ಕುತೂಹಲಗಳಿಗೆ ಉತ್ತರ ಪಡೆದುಕೊಂಡರು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ, ಕಲಾಪ್ರಜ್ಞೆ ಹಾಗೂ ಶಾಸ್ತ್ರೀಯ ಸಂಗೀತದ ಬಗ್ಗೆ ಅಭಿರುಚಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.
ಭಾರತೀಯ ಶಾಸ್ತ್ರೀಯ ಸಂಗೀತದ ಸೊಬಗನ್ನು ವಿದ್ಯಾರ್ಥಿಗಳಿಗೆ ನೇರವಾಗಿ ಪರಿಚಯಿಸಿದ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net