

ಟಿ.ಎಚ್. ಶಿವಕುಮಾರ್, ಮಲೇಬೆನ್ನೂರು
ಪಟ್ಟಣದ 23 ವಾರ್ಡ್ಗಳಿಗೂ ಸಮರ್ಪಕವಾಗಿ ಕುಡಿಯುವ ನೀರು ವಿತರಿಸುವಲ್ಲಿ ಪುರಸಭೆ ಆಡಳಿತ ವಿಫಲವಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದು, ಜನರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಾರ್ವಜನಿಕರ ಸಮಸ್ಯೆಗಳಿಗೆ ಪುರಸಭೆ ಮುಖ್ಯಾಧಿಕಾರಿ ರವಿಪ್ರಕಾಶ್ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಪುರಸಭೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹಾಗೂ ಶಾಸಕ ಬಿ.ಪಿ. ಹರೀಶ್ ಮಧ್ಯಪ್ರವೇಶಿಸಿ, ನೀರಿನ ವ್ಯವಸ್ಥೆ ಸುಧಾರಿಸುವಂತೆ ಮುಖ್ಯಾಧಿಕಾರಿಗೆ ಸೂಚನೆ ನೀಡಿದ್ದಾರೆ. ಪಟ್ಟಣದ ಕೆಲವು ಬಡಾವಣೆಗಳಲ್ಲಿ ನಿಗದಿತ ಸಮಯಕ್ಕೆ ನೀರು ಪೂರೈಕೆಯಾಗುತ್ತಿಲ್ಲ, ಇನ್ನೂ ಕೆಲವೆಡೆ ಅಗತ್ಯ ಪ್ರಮಾಣದಲ್ಲಿ ನೀರು ದೊರೆಯುತ್ತಿಲ್ಲ ಎಂಬ ದೂರುಗಳಿವೆ. ಪುರಸಭೆಗೆ ನಿಯಮಿತವಾಗಿ ತೆರಿಗೆ ಪಾವತಿಸುತ್ತಿದ್ದರೂ, ದಿನನಿತ್ಯದ ಬಳಕೆ ಹಾಗೂ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಬಂದಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.
ವಿವಿಧ ವಾರ್ಡ್ಗಳಲ್ಲಿ ಎದುರಾಗಿರುವ ನೀರಿನ ಸಮಸ್ಯೆಯನ್ನು ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂದು ಪುರಸಭೆ ಸದಸ್ಯರು ದೂರಿದ್ದಾರೆ. ಸಮಸ್ಯೆಗಳನ್ನು ತಿಳಿಸಿದಾಗ ತಣ ಪರಿಹಾರ ಕಲ್ಪಿಸಬೇಕಾದ ಅಧಿಕಾರಿಗಳು ರ್ನಿಲಕ್ಷ ವಹಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮಲೇಬೆನ್ನೂರು ಪಟ್ಟಣದ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಮುಖ್ಯಾಧಿಕಾರಿ ರವಿಪ್ರಕಾಶ್ ಅವರಿಗೆ ದೂರವಾಣಿ ಕರೆ ಮಾಡಿ ಎಲ್ಲ 23 ವಾರ್ಡ್ಗಳಿಗೂ ಸಮರ್ಪಕವಾಗಿ ನೀರು ಪೂರೈಸುವಂತೆ ಸೂಚಿಸಿದ್ದಾರೆ. ಪ್ರತಿಯೊಂದು ವಾರ್ಡ್ನ ನೀರು ಸರಬರಾಜು ವ್ಯವಸ್ಥೆ ಪರಿಶೀಲಿಸಿ, ಸಮಸ್ಯೆ ಇರುವೆಡೆ ತಣ ಪರಿಹಾರ ಒದಗಿಸಬೇಕು. ಕರ್ತವ್ಯ ನಿರ್ವಹಣೆಯಲ್ಲಿ ರ್ನಿಲಕ್ಷ ತೋರಿದರೆ ಅಥವಾ ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಎಲ್ಲ 23 ವಾರ್ಡ್ಗಳಿಗೂ ಸಮಾನವಾಗಿ ನೀರು ಪೂರೈಸಲು ಪುರಸಭೆ ಆಡಳಿತ ರ್ನಿದಿಷ್ಟ ವೇಳಾಪಟ್ಟಿ ರೂಪಿಸಿ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ಪೈಪ್ಲೈನ್ಗಳ ಸೋರಿಕೆ, ನೀರಿನ ಟ್ಯಾಂಕ್ಗಳ ನಿರ್ವಹಣೆ ಹಾಗೂ ಪಂಪ್ಸೆಟ್ಗಳ ಕಾರ್ಯಮತೆಯನ್ನು ಪರಿಶೀಲಿಸಿ ತಾಂತ್ರಿಕ ದೋಷಗಳಿದ್ದರೆ ತಣ ಸರಿಪಡಿಸಬೇಕು. ವಾರ್ಡ್ ವಾರು ದೂರು ಸ್ವೀಕರಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ದೂರು ಬಂದ ತಣ ಸಿಬ್ಬಂದಿ ಸ್ಥಳಕ್ಕೆ ತೆರಳಿ ಸಮಸ್ಯೆ ಬಗೆಹರಿ ಸುವಂತಾಗಬೇಕು ಎಂಬುದು ಸಾರ್ವಜನಿಕರ ಒತ್ತಾಯ.