ದಾವಣಗೆರೆಯ ಬಾಪೂಜಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಗುರುವಾರ ‘ವಿವೇಕ್ ಪೋಷಕರ ಆರೋಗ್ಯ ಕಾರ್ಯಾಗಾರ’ದಲ್ಲಿ ಡಾ. ಅನುರೂಪ ಎಂ.ಎಸ್, ಡಾ. ಜಿ. ಗುರುಪ್ರಸಾದ್, ಡಾ.ಮೃತ್ಯುಂಜಯ, ಗುಬ್ಬಿ, ಡಾ. ರೇವಪ್ಪ ಇದ್ದರು.
ದಾವಣಗೆರೆ :ಬೇಸಿಗೆಯಲ್ಲಿ ಶುದ್ಧ ನೀರು, ತಾಜಾ ಮನೆಯೂಟ ಮತ್ತು ವೈಯುಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಬಹುತೇಕ ಸಾಂಕ್ರಾಮಿಕ ರೋಗಗಳಿಂದ ದೂರವಿರಲು ಸಾಧ್ಯ ಎಂದು ಜೆಜೆಎಂ ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ. ಅನುರೂಪ ಎಂ.ಎಸ್. ಹೇಳಿದರು.
ನಗರದ ಬಾಪೂಜಿ ಮಕ್ಕಳ ಆರೋಗ್ಯ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ವಿವೇಕ್ ಪೋಷಕರ ಆರೋಗ್ಯ ಕಾರ್ಯಾಗಾರ’ದಲ್ಲಿ ‘ಆರಂಭವಾಗುತ್ತಿದೆ ಬೇಸಿಗೆ-ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರವಿರಲಿ’ ಎಂಬ ವಿಷಯದ ಕುರಿತು ಮಾತನಾಡಿದರು.
ಬೇಸಿಗೆ ಬಂದಿದೆ, ಈ ವರ್ಷ ಬಿಸಿಲು ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೇಸಿಗೆ ಬಿಸಿಲು ಕೇವಲ ತಾಪವಲ್ಲ, ಅದು ಕಾಣದ ಸಾಂಕ್ರಾಮಿಕ ರೋಗಗಳಿಗೆ ಆಹ್ವಾನವಾಗಿದೆ. ಸಾಂಕ್ರಾಮಿಕ ರೋಗಗಳು ನಮ್ಮ ಮನೆ ಬಾಗಿಲಿಗೆ ಬರುತ್ತವೆ ಎಂದು ತಿಳಿಸಿದರು.
ಮಕ್ಕಳ ಆಸ್ಪತ್ರೆಯ ನಿರ್ದೇಶಕ ಡಾ. ಜಿ. ಗುರುಪ್ರಸಾದ್, ಮಕ್ಕಳ ಹಿರಿಯ ತಜ್ಞ ಡಾ. ಬಾಣಾಪುರಮಠ್, ಆಸ್ಪತ್ರೆಯ ವ್ಯವಸ್ಥಾಪಕ ಗುಬ್ಬಿ, ಡಾ. ಕೌಜಲಗಿ, ಡಾ.ಮೃತ್ಯುಂಜಯ, ಡಾ. ರೇವಪ್ಪ, ಮಕ್ಕಳ ಪಾಲಕರು, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು.