ಇದನ್ನು ಖಂಡಿಸಿ ಚುನಾವಣಾಧಿಕಾರಿಗೆ ದೂರು ನೀಡಿದ್ದೇವೆ. ಇದರ ಪ್ರತಿಯನ್ನು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಕಳಿಸುತ್ತೇವೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಬೇಕಾದರೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಯೇ ಇಲ್ಲಿಗೆ ಬಂದು, ಅವರ ಕಣ್ಗಾವಲಿನಲ್ಲೆ ಚುನಾವಣಾ ಪ್ರಕ್ರಿಯೆ ನಡೆಸಬೇಕು. ಅಧಿಕಾರಿಗಳಲ್ಲಿರುವ ಭಯ ಹೋಗಲಾಡಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.