ರಾಜ್ಯದಲ್ಲಿ 2028ರಲ್ಲಿ ಬಿಜೆಪಿ ಅಧಿಕಾರಕ್ಕೆ

ದಾವಣಗೆರೆಯಲ್ಲಿ ಗುರುವಾರ ಆಯೋಜಿಸಿದ್ದ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಮತ್ತು ವಿಸ್ತಾರಕರಿಗೆ ಅಭಿನಂದಿಸುವ ಸಮಾರಂಭದ ಉದ್ಘಾಟನೆ ವೇಳೆ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್‌ವಾಲ್, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ, ಬಸವರಾಜ ನಾಯ್ಕ, ಡಾ.ಎ.ಎಚ್. ಶಿವಯೋಗಿಸ್ವಾಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರಾಜಶೇಖರ್, ಮುಖಂಡರಾದ ಬಿ.ಜಿ. ಅಜಯ್ ಕುಮಾರ್, ಮಾಡಾಳು ಮಲ್ಲಿಕಾರ್ಜುನ್, ಲೋಕಿಕೆರೆ ನಾಗರಾಜ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ರಾಧಾ ಮೋಹನ್‌ದಾಸ್ ಅಗರ್‌ವಾಲ್ ವಿಶ್ವಾಸ
  • ಅಭಿನಂದನಾ ಸಮಾರಂಭ
ದಾವಣಗೆರೆ : ಕರ್ನಾಟಕದಲ್ಲಿ 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್‌ವಾಲ್ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾ ಬಿಜೆಪಿಯಿಂದ ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಮತ್ತು ವಿಸ್ತಾರಕರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಕಾರ್ಯಕರ್ತರು ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿದರೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಹಾಗಾಗಿ ಇದೊಂದು ಮಹತ್ವದ ಚುನಾವಣೆಯಾಗಿದೆ ಎಂದು ತಿಳಿಸಿದರು.
ಬಿಜೆಪಿ ನಾಯಕರ ಪಕ್ಷವಲ್ಲ, ಕಾರ್ಯಕರ್ತರ ಪಾರ್ಟಿ. ಚುನಾವಣೆಯಲ್ಲಿ ನಿಮ್ಮ ಶ್ರಮ, ತ್ಯಾಗ, ಬೆವರಿನಿಂದ ಶಾಸಕರು ಆಯ್ಕೆಯಾಗುತ್ತಾರೆ. ಈ ಚುನಾವಣೆಯಲ್ಲಿ ಸಮಯ ಬಹಳ ಕಡಿಮೆಯಿದೆ. ಕಾರ್ಯಕರ್ತರು ಚುನಾವಣೆ ಮುಗಿಯುವ ವರೆಗೆ ಬೂತ್ ಬಿಟ್ಟು ಕದಲಬಾರದು ಎಂದು ಸೂಚನೆ ನೀಡಿದರು.

ಉಪ ಚುನಾವಣೆಯ ಟಾಸ್ಕ್

ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ವಿಫಲರಾಗುವ ಜಿಲ್ಲೆಯ ನಾಯಕರಿಗೆ ಮುಂಬರುವ ವಿಧಾನಸಭಾ ಚುನಾವಣೆಯ ಟಿಕೆಟ್ ನೀಡುವುದಿಲ್ಲ ಎಂದು ರಾಧಾ ಮೋಹನ್‌ದಾಸ್ ಅಗರ್‌ವಾಲ್ ಹೇಳಿದರು.
ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸೇರಿ ವೇದಿಕೆ ಮೇಲಿದ್ದ ಜಿಲ್ಲೆಯ ನಾಯಕರಿಗೆ 2-3 ಶಕ್ತಿ ಕೇಂದ್ರಗಳ ಜವಾಬ್ದಾರಿ ನೀಡಬೇಕು. ಅವರು ಆ ಶಕ್ತಿ ಕೇಂದ್ರಗಳಲ್ಲೇ ಉಳಿದು ಕೆಲಸ ಮಾಡಬೇಕು. ಯಾರ ಪ್ರದೇಶದಲ್ಲಿ ಬಿಜೆಪಿ ಸೋಲುವುದೋ, ಅಂಥವರಿಗೆ ವಿಧಾನಸಭಾ ಚುನಾವಣೆಯ ಟಿಕೆಟ್ ನೀಡುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಇವರೆಲ್ಲ ಮಾತಿನ ಮಲ್ಲರಿದ್ದಾರೆ, ಕಾರ್ಯಕರ್ತರ ಜತೆಗೆ ಇವರೂ ತಳಮಟ್ಟದಲ್ಲಿ ಕೆಲಸ ಮಾಡಬೇಕು. ಜಿಲ್ಲಾಧ್ಯಕ್ಷರು ಇವರ ಮೊಬೈಲ್ ಫೋನನ್ನು ಆಗಾಗ ಪರಿಶೀಲಿಸಬೇಕು. ಅವರು ಏನು ಕೆಲಸ ಮಾಡಿದ್ದಾರೆ ಎಂಬುದರ ಕಡೆಗೆ ನಿಗಾ ವಹಿಸಬೇಕು ಎಂದರು. ವೇದಿಕೆಯಲ್ಲಿದ್ದ ನಾಯಕರನ್ನು ನಿಲ್ಲಿಸಿ ಸೂಚನೆಯನ್ನು ಪಾಲಿಸುವ ಸಂಕಲ್ಪ ಮಾಡಿಸಿದರು.
‘ನಾನು ಕಟ್ಟುನಿಟ್ಟಿನ ಟಾಸ್ಕ್ ಮಾಸ್ಟರ್ ಇದ್ದೇನೆ. ಮತ್ತೆ ವಾಪಸ್ ಬರುತ್ತೇನೆ. ನಿಮ್ಮೆಲ್ಲರ ಕೆಲಸದ ಲೆಕ್ಕ ಪಡೆಯುತ್ತೇನೆ. ಯಾರಿಗೆ ಟಿಕೆಟ್ ಸಿಗುವುದೋ ಗೊತ್ತಿಲ್ಲ, ಒಟ್ಟಿನಲ್ಲಿ ದಾವಣಗೆರೆ ದಕ್ಷಿಣ ಉಪ ಚುನಾವಣೆಯನ್ನು ಗೆಲ್ಲಿಸುವುದು ನಮ್ಮ ಗುರಿ’ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net